ನದಿಗೆ ಕೊಳಚೆ ನೀರು ಸೇರದಂತೆ ಕ್ರಮ

blank

ತೀರ್ಥಹಳ್ಳಿ: ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಿ ಅನೇಕ ಜನಪರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಡ, ಮಧ್ಯಮ ವರ್ಗಗಳ ಕುಟುಂಬಗಳಿಗೆ ನಿವೇಶನ ಹಂಚಿಕೆಗೆ ಜಾಗ ಗುರುತಿಸಲಾಗಿದ್ದು, ಮಂಜೂರಾತಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ದುಬಾರಿ ದರದ ಕಾರಣ ಬಡವರು, ಮಧ್ಯಮ ವರ್ಗದವರು ನಿವೇಶನ ಖರೀದಿಸಲು ಸಾಧ್ಯವಾಗುತ್ತಿಲ್ಲ. ನಿವೇಶನ ಹಂಚಿಕೆಗೆ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ತುಂಗಾ ನದಿಗೆ ಕೊಳಚೆ ನೀರು ಸೇರದಂತೆ ತಡೆಯಲು ಯೋಜನೆ ರೂಪಿಸಲು ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದೆ. ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಪಟ್ಟಣ ಪಂಚಾಯಿತಿಗೆ 34 ಕೋಟಿ ರೂ. ಆದಾಯದ ಬಜೆಟ್ ತಯಾರಿಸಲಾಗಿದೆ. ನಿರೀಕ್ಷಿತ ಆದಾಯ ಸಂಗ್ರಹವಾದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ಕಸ, ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಯಂತ್ರಗಳ ಮೂಲಕ ಗೊಬ್ಬರ ತಯಾರಿಸಲು ಕೋಟ್ಯಂತರ ರೂ. ವೆಚ್ಚ ಮಾಡಲಾಗಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಗೊಬ್ಬರ ತಯಾರಿಕೆ ಸಾಧ್ಯವಾಗುತ್ತಿಲ್ಲ. ಸಂಗ್ರಹಿಸಿದ ಕಸ ವಿಲೇವಾರಿಗೆ ಟೆಂಡರ್ ಆಹ್ವಾನಿಸಲು ನಿರ್ಧಾರ ಮಾಡಲಾಗಿದೆ ಎಂದು ರಹಮತ್ ಉಲ್ಲಾ ಅಸಾದಿ ಹೇಳಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿ ಉದ್ಯಾನಗಳ ಅಭಿವೃದ್ಧಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಉದ್ಯಾನಗಳನ್ನು ಸ್ವಚ್ಛಗೊಳಿಸಿ, ವಾರ್ಡ್‌ನ ಜನರಿಗೆ ನಿರ್ವಹಣೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ತಿಳಿಯಲು ೆಬ್ರವರಿ ಮೊದಲ ವಾರದಲ್ಲಿ ವಾರ್ಡ್‌ಸಭೆ ನಡೆಯಲಿದೆ ಎಂದರು.
ತೀರ್ಥಹಳ್ಳಿ ಪಟ್ಟಣದಲ್ಲಿ ಕುವೆಂಪು ಹೆಸರಿನಲ್ಲಿ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸರ್ಕಾರ, ಜನಪ್ರತಿನಿಧಿಗಳ ಅನುದಾನದಡಿ ನಿರ್ಮಿಸಲಾಗುತ್ತದೆ. ಮೀನು ಮಾರುಕಟ್ಟೆಯಲ್ಲಿ ಹೊಸ ಕಟ್ಟಡ ನಿರ್ಮಿಸಿ, ಆ ಮಳಿಗೆಗಳಲ್ಲಿ ಮೀನು, ಮಾಂಸ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

blank
Share This Article
blank

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

ನಿಮ್ಮ ಪತಿ ಬಿಗಿಯಾದ ಬೆಲ್ಟ್ ಧರಿಸುತ್ತಿದ್ದಾರಾ? ಅವರಿಗೆ ಈ ಕುರಿತಾಗಿ ಜಾಗೃತಿ ಮೂಡಿಸಿ..belt

belt: ಇತ್ತೀಚಿನ ದಿನಗಳಲ್ಲಿ ಬೆಲ್ಟ್ ಧರಿಸುವುದು ಸಾಮಾನ್ಯ. ಆದರೆ, ಬೆಲ್ಟ್ ಧರಿಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು…

blank