More

    ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಕ್ರಮ

    ಹನೂರು: ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಮುಖ್ಯ ಗುರಿ. ಈ ದಿಸೆಯಲ್ಲಿ ಯೋಜನೆ ರೂಪಿಸಲಾಗಿದ್ದು, ಅಗತ್ಯ ಕ್ರಮವಹಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

    ತಾಲೂಕಿನ ರಾಮಾಪುರ ಗ್ರಾಮದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಈ ಭಾಗದಲ್ಲಿ ಹೆಣ್ಣು ಮಕ್ಕಳು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಜೀವನ ನಿರ್ವಹಣೆಗೆ ತುಂಬ ತೊಂದರೆಯನ್ನು ಅನುಭವಿಸುತ್ತಿರುವ ಜತೆಗೆ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪರದಾಡುತ್ತಿದ್ದಾರೆ. ಅಲ್ಲದೆ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದು ತೀರಿಸಲು ತೊಂದರೆ ಪಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆದ್ದರಿಂದ ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಹೆಣ್ಣು ಮಕ್ಕಳಿಗೆ ಉದ್ಯೋಗ ಅತ್ಯಾವಶ್ಯಕವಾಗಿದೆ. ಈ ಸಂಬಂಧ ಶಾಶ್ವತ ಪರಿಹಾರ ಪರಿಹಾರ ಕಲ್ಪಿಸುವುದೇ ನನ್ನ ಮುಖ್ಯ ಉದ್ದೇಶ ಎಂದರು.

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ತಾಲೂಕು ಯೋಜನಾಧಿಕಾರಿ ಪ್ರವೀಣ್‌ಕುಮಾರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಾಜೇಂದ್ರ, ಪಿಎಸಿಸಿ ಅಧ್ಯಕ್ಷ ಮುತ್ತುರಾಜು ಹಾಗೂ ಯೋಜನೆಯ ಸೇವಾ ಪ್ರತಿನಿಧಿಗಳು ಇದ್ದರು.

    ಪರಿಶೀಲನೆ: ಬಳಿಕ ರಾಮಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, ಪ್ರಗತಿಯಲ್ಲಿರುವ ಡಯಾಲಿಸಿಸ್ ಕೇಂದ್ರದ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದರು. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದರ ಮೂಲಕ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಅಧಿಕಾರಿಗಳು ಸೂಚಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವುದರ ಜತೆಗೆ ಜನರಿಗೆ ಉತ್ತಮ ಸೇವೆ ನೀಡಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts