More

    ಮದ್ದೂರು ತಾಲೂಕು ಕಸಾಪದಲ್ಲಿ ಕ್ರಿಯಾಶೀಲ ಚಟುವಟಿಕೆ

    ಮದ್ದೂರು: ಎರಡು ವರ್ಷಗಳಿಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಅಧ್ಯಕ್ಷ ವಿ.ಸಿ.ಉಮಾಶಂಕರ್ ನೇತೃತ್ವದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಕಸಾಪ ಜಿಲ್ಲಾ ಉಪಾಧ್ಯಕ್ಷ ಪ್ರೊ.ಬಿ.ಎಸ್.ಬೋರೇಗೌಡ ಹೇಳಿದರು.


    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಹಾಗೂ ಕನ್ನಡ ಕಟ್ಟಾಳುಗಳ ಸಭೆಯಲ್ಲಿ ಮಾತನಾಡಿದರು.


    ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎಂ.ಕ್ರಾಂತಿಸಿಂಹ ಮಾತನಾಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯ ಜಿಲ್ಲೆಗೆ ಬಂದಿದೆ. ವೈಭವವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ಸಮಯದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.


    ಕಸಾಪ ತಾಲೂಕು ಅಧ್ಯಕ್ಷ ವಳಗೆರಹಳ್ಳಿ ವಿ.ಸಿ.ಉಮಾಶಂಕರ್ ಮಾತನಾಡಿ, ನಾನು ಅಧ್ಯಕ್ಷನಾದ ದಿನದಿಂದ ಇಂದಿನವರೆಗೂ ಕ್ರಿಯಾತ್ಮಕ ಮತ್ತು ಸಂಘಟನಾತ್ಮಕವಾಗಿ ಕೆಲಸ ಮಾಡುವುದರ ಜತೆಗೆ, ರಾಜ್ಯ ಮತ್ತು ಜಿಲ್ಲಾ ಸಮಿತಿಯ ಆದೇಶಗಳನ್ನು ಚಾಚೂತಪ್ಪದೆ ಪಾಲಿಸುವ ಮೂಲಕ ಕನ್ನಡದ ಕೆಲಸವನ್ನು ಮಾಡಿದ್ದೇನೆ. ಅಲ್ಲದೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಪೂರಕವಾಗುವಂತೆ ಮಾತನಾಡಿದ್ದೇನೆ. ತಾಲೂಕಿನಲ್ಲಿ ಗೊಂದಲ ಸೃಷ್ಟಿಸುವುದನ್ನು ಬಿಟ್ಟು ಕನ್ನಡ ಕಟ್ಟುವ ಕೆಲಸಕ್ಕೆ ನಮಗೆ ಶಕ್ತಿ ನೀಡಬೇಕು ಎಂದು ಕೋರಿದರು.


    ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ಪ್ರೊ.ಬಿ.ಎಸ್.ಬೋರೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎಂ.ಕ್ರಾಂತಿಸಿಂಹ, ಮಹಿಳಾ ಘಟಕದ ಅಧ್ಯಕ್ಷೆ ಕರಡಕರೆ ವಸಂತಾ, ಗೌರವಾಧ್ಯಕ್ಷೆ ಮಂಜುಳಾ ಬೋರೇಗೌಡ, ಸೌಭಾಗ್ಯಮ್ಮ, ಉಪಾಧ್ಯಕ್ಷ ತಿಪ್ಪೂರು ರಾಜೇಶ್, ಶಶಿಕಲಾ, ವಿ.ಎಚ್. ಶಿವಲಿಂಗಯ್ಯ, ಸೋಪುರ ಉಮೇಶ್, ಶ್ರೀನಿವಾಸ್, ಪಟೇಲ್ ಹರೀಶ್, ಜಯಲಕ್ಷ್ಮೀ, ಪುಟ್ಟರತ್ನಮ್ಮ, ಧರಣಿ, ವೆಂಕಟೇಶ್, ಕರಡಕೆರೆ ಯೋಗೇಶ್, ಅಣ್ಣೂರು ಮಹೇಂದ್ರ, ಎಂ. ವೀರಪ್ಪ, ತೂಬಿನಕೆರೆ ರಾಜು, ಕಲಾವಿದ ಬಾಲಕೃಷ್ಣ, ಮರಳಿಗ ಶಿವರಾಜು, ಶಶಿಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts