More

    ಕಾರ್ಯಕರ್ತರೇ ಬಿಜೆಪಿ ಆಸ್ತಿ

    ಸವದತ್ತಿ: ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಕಾರ್ಯಕರ್ತರೇ ಪಕ್ಷದ ಆಸ್ತಿ ನಿಷ್ಠೆಯಿಂದ ದುಡಿದವರಿಗೆ ಸ್ಥಾನಮಾನ ಖಚಿತ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

    ಪಟ್ಟಣದ ಮಾಮನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಗ್ರಾಮ ಸ್ವರಾಜ್’ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಪಂ ಚುನಾವಣೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕಾರಣ ಸದೃಢ ಕಾರ್ಯಕರ್ತರ ಪಡೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾರ್ಯಕರ್ತರು ಸಹ ಪಕ್ಷದ ಬೆಂಬಲಿತ ಅಭ್ಯರ್ಥಿ ಪರ ಪ್ರಚಾರ ಮಾಡಿ ಚುನಾವಣೆಯಲ್ಲಿ ಗೆಲ್ಲಲು
    ಸಹಕಾರ ನೀಡಬೇಕು ಎಂದು ಕೋರಿದರು.

    ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಗ್ರಾಪಂ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು, ಕಾರ್ಯಕರ್ತರಲ್ಲಿ ಒಗ್ಗಟ್ಟು ಮೂಡಿಸಿ ಶಕ್ತಿ ತುಂಬುವುದು ಇದರ ಉದ್ದೇಶವಾಗಿದೆ. ಕಾರ್ಯಕರ್ತರು ಆಂತರಿಕ ಭಿನ್ನಾಭಿಪ್ರಾಯ ದೂರವಿಟ್ಟು ಪ್ರತಿಯೊಂದು ಗ್ರಾಮಮಟ್ಟದಲ್ಲಿ ಸಭೆಯನ್ನು ನಡೆಸಿ, ಎಲ್ಲರೂ ಒಂದಾಗಿ ಪಕ್ಷದ ಗೆಲುವಿಗೆ ಶ್ರಮಿಸಬೇಕು. ಬೇರುಮಟ್ಟದಲ್ಲಿ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕರೆ ಭವಿಷ್ಯದಲ್ಲಿ ಬರುವ ಇತರೆ ಚುನಾವಣೆ ಎದುರಿಸಲು ಸುಲಭವಾಗಲಿದೆ ಎಂದರು.

    ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಸಾಮರ್ಥ್ಯ ಇರುವವರನ್ನು ಜಾತಿ, ಮತ ನೋಡದೆ ಮಣೆ ಹಾಕಬೇಕು. ಎಲ್ಲ ಗ್ರಾಪಂಗಳಲ್ಲೂ ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ ಬರುವಂತಾಗಲು ಸಚಿವರು, ಸಂಸದರು, ಶಾಸಕರು ಕಾರ್ಯಕರ್ತರಂತೆ ದುಡಿಯಲಿದ್ದಾರೆ. ಕಾರ್ಯಕರ್ತರ ಪರವಾಗಿ ಇದೇ ಮೊದಲಿಗೆ ಗ್ರಾಮ ಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿಯಲ್ಲಿ ದುಡಿಯುವ ಸಾಮಾನ್ಯ ಕಾರ್ಯಕರ್ತರಿಗೂ ಒಳ್ಳೆಯ ಭವಿಷ್ಯವಿದೆ ಎಂದರು.

    ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಮಹಾದೇವಪ್ಪ ಯಾದವಾಡ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts