ಕಾರ್ಯಕರ್ತರು ಪರಿಷತ್ ಚುನಾವಣೆ ಗೆದ್ದು, ಸಾಮರ್ಥ್ಯ ಸಾಬೀತು ಪಡಿಸಿ: ಬಿಜೆಪಿ ರಾಜ್ಯ ಕಾರ್ಯದರ್ಶಿ ನವೀನ್ ಹೇಳಿಕೆ

blank


ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಪಕ್ಷದ ಕಾರ್ಯಕರ್ತರು ತಮ್ಮ ಶಕ್ತಿ, ಸಾಮರ್ಥ್ಯ ಸಾಬೀತು ಪಡಿಸಬೇಕಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಹೇಳಿದರು.

blank
blank

ನಗರದ ಪಕ್ಷದ ಚುನಾವಣೆ ಕಾರ್ಯಾಲಯದಲ್ಲಿ ಬುಧವಾರ ನಗರ ಮಂಡಲ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ನಗರದ ಪದವೀಧರರ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಸರ್ಕಾರ ಶಿಕ್ಷಕರಿಗೆ, ನಿರುದ್ಯೋಗಿ ಪದವೀಧರರಿಗೆ ಏನೆಲ್ಲ ಕೊಡುಗೆ ಕೊಟ್ಟಿದೆ ಎಂಬುದರ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಪದವೀಧರ ನಿರುದ್ಯೋಗಿಗಳಿಗೆ, ಶಿಕ್ಷಕರಿಗೆ 73 ಸಾವಿರ ಕೋಟಿ ರೂ. ಗಳನ್ನು ಪ್ರಧಾನಿ ಮೋದಿ ಬಿಡುಗಡೆಗೊಳಿಸಿದ್ದಾರೆ. ನಿರುದ್ಯೋಗಿ ಪದವೀಧರರು ಸ್ವಾವಲಂಭಿಯಾಗಿ ಜೀವಿಸಲು ಬ್ಯಾಂಕ್‌ಗಳಿಂದ ಯಾವ್ಯಾವ ಸೌಲಭ್ಯಗಳಿವೆ ಎಂಬುದನ್ನು ತಿಳಿಸಬೇಕು ಎಂದರು.

ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್ ಮಾತನಾಡಿ, ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಿಮ್ಮಗಳ ಮೇಲೆ ಬಹುದೊಡ್ಡ ಜವಾಬ್ದಾರಿಯಿದೆ ಎಂದು ತಿಳಿಸಿದರು.

blank

ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ, ನಗರ ಮಂಡಲ ಅಧ್ಯಕ್ಷ ಜೆ.ಶಶಿಧರ್, ಪ್ರಮುಖರಾದ ಸುರೇಶ್ ಸಿದ್ದಾಪುರ, ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್ ಮತ್ತಿತರರು ಇದ್ದರು.

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…