More

    ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಪ್ರಯತ್ನ

    ಗೋಕಾಕ: ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.

    ಇಲ್ಲಿನ ಎನ್‌ಎಸ್‌ಎ್ ಗೃಹ ಕಚೇರಿಯಲ್ಲಿ ಸೋಮವಾರ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಹೋರಾಟಗಳಿಗೆ ಸಂಪೂರ್ಣ ಬೆಂಬಲ ಇದೆ ಎಂದರು.

    ಎರಡು ವರ್ಷಗಳಿಂದ ಕಾರ್ಯಕರ್ತೆಯರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಾಕಷ್ಟು ಬಾರಿ ಸರ್ಕಾರದ ಗಮನ ಸೆಳೆದು ಪ್ರಯತ್ನಿಸಿದ್ದಾರೆ. ಆದರೂ ಪ್ರಯೋಜನವಾಗಿಲ್ಲ. ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ 1,450ಕ್ಕೂ ಹೆಚ್ಚು ಕಾರ್ಯಕರ್ತೆಯರು ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸರ್ಕಾರ 3,600 ರೂ. ಗೌರವಧನ ನೀಡುತ್ತಿದೆ. ಕುಟುಂಬ ನಿರ್ವಹಣೆಗೆ ಇದು ಸಾಕಾಗುವುದಿಲ್ಲ. ಕನಿಷ್ಠ 5,000 ರೂ. ವೇತನ ಹೆಚ್ಚಳ ಮಾಡಿದರೆ ಅನುಕೂಲವಾಗುತ್ತದೆ. ಜತೆಗೆ ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

    ಮುಂದಿನ ದಿನಗಳಲ್ಲಿ ವಸತಿರಹಿತ ಬಿಸಿಯೂಟ ಕಾರ್ಯಕರ್ತೆಯರಿಗೆ ವಸತಿ ಸೌಲಭ್ಯಗಳನ್ನು ದೊರಕಿಸಿಕೊಡಲಾಗುವುದು ಎಂದ ಭರವಸೆ ನೀಡಿದ ಶಾಸಕರು, ಕೋವಿಡ್ ಸಮಯದಲ್ಲಿ ಸಲ್ಲಿಸಿದ ಸೇವೆ ಸ್ಮರಿಸಿದರು. ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ಎ.ಬಿ. ಮಲಬನ್ನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts