More

    ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮ

    ತಿ.ನರಸೀಪುರ: ಸರಳ, ಸಜ್ಜನಿಕೆಯ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಎಸ್.ಬಾಲರಾಜು ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರ ತಾಯೂರು ಪ್ರಕಾಶ್ ಭವಿಷ್ಯ ನುಡಿದರು.

    ಪಟ್ಟಣಕ್ಕೆ ಭೇಟಿ ನೀಡಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಬಾಲರಾಜ್ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಸನ್ಮಾನಿಸಿ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ದೊರಕಲಿದ್ದು, ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳು ಬಿಜೆಪಿ ಪಕ್ಷಕ್ಕೆ ವರದಾನವಾಗಲಿವೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು, ಮುಖಂಡರು ಅವಿರತ ಶ್ರಮ ಹಾಕಲಿದ್ದಾರೆ ಎಂದರು.

    ತಿ.ನರಸೀಪುರ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದನ್ನು ಕಳೆದ ಬಾರಿಯ ಚುನಾವಣೆಯಲ್ಲಿ ಅಶ್ವಿನ್‌ಕುಮಾರ್ ಅವರು ತಮ್ಮ ಎದುರಾಳಿಯಾಗಿದ್ದ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಸೋಲಿಸುವ ಮೂಲಕ ಸಾಬೀತು ಪಡಿಸಿದ್ದರು. ಅಶ್ವಿನ್‌ಕುಮಾರ್‌ಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರಲ್ಲಿದ್ದ ಗೊಂದಲ ಹಾಗೂ ಸಮರ್ಪಕವಾಗಿ ಪ್ರಚಾರ ಮಾಡದ ಹಿನ್ನೆಲೆಯಲ್ಲಿ ಸೋಲುಂಟಾಗಿತ್ತಾದರೂ, ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ದರು. ಜೆಡಿಎಸ್ ಪರವಾಗಿ ಬಿದ್ದ ಮತಗಳು ಈ ಬಾರಿ ಬಾಲರಾಜ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

    ಅಲ್ಲದೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಸಾಂಪ್ರದಾಯಿಕ ಮತಗಳಿರುವುದರಿಂದ ಅವರ ಗೆಲುವು ಸುಲಭವಾಗಲಿದೆ. ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಶ್ರೀರಕ್ಷೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭದ್ರತೆಗಾಗಿ ತೆಗೆದುಕೊಂಡ ಹತ್ತು ಹಲವು ನಿರ್ಧಾರಗಳಿಂದ ಮತದಾರರು ಈ ಬಾರಿ ಚಾಮರಾಜನಗರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಗೆ ಜಯ ತಂದುಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮಹರ್ಷಿ ವಾಲ್ಮೆಕಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಯಡದೊರೆ ಮಹೇಶ್ ನಾಯಕ್, ಕುರುಬೂರು ಶಿವು, ಸಾಯಿ ಮೊಬೈಲ್ ಮಾದೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts