

ಬೆಂಗಳೂರು: ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಏಕೈಕ ಪುತ್ರ ಅಭಿಷೇಕ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಸ್ಟಾರ್ ನಟ,ನಟಿಯರು ಭಾಗಿಯಾಗಿ ನವದಂಪತಿಗಳಿಗೆ ಶುಭಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮದುವೆಯಲ್ಲಿ ಅಭಿಷೇಕ್ ಗೋಲ್ಡನ್ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡರೆ, ವಧು ಅವಿವಾ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಕೂಡ ಗೋಲ್ಡನ್ ಸೀರೆಯಲ್ಲಿ ಮಿಂಚಿದ್ದಾರೆ. ವಿಶೇಷ ಅಂದರೆ ತಮ್ಮ ಮದುವೆಗೆ, ಅವಿವಾ ಅವರೇ ಉಡುಗೆಯನ್ನ ಡಿಸೈನ್ ಮಾಡಿದ್ದಾರೆ ಎನ್ನಲಾಗಿದೆ.
ಅಭಿಷೇಕ್ ಮದುವೆ-ಅವಿವಾ ಕಲರ್ಫುಲ್ ಫೋಟೋ ವೈರಲ್ ಆಗಿದೆ. ನಟ,ನಟಿಯರು ಹಾಗೂ ರಾಜಕೀಯ ಗಣ್ಯರು ಆಗಮಿಸಿ ನವ ದಂಪತಿಗೆ ಶುಭಕೋರಿದ್ದಾರೆ.