ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಸೇರಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್ನಟನೊಬ್ಬನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ-ನಟಿಯರು ದರ್ಶನ್ಗೆ ಬೆಂಬಲ ಸೂಚಿಸುತ್ತಿದ್ದು, ದಾಸನನ್ನು ಭೇಟಿ ಮಾಡಲು ಜೈಲಿಗೆ ಬರುತ್ತಿದ್ದಾರೆ. ಇದೀಗ ನಟ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಧನ್ವೀರ್, ಚಿಕ್ಕಣ್ಣ ಹಾಗೂ ಅಬಿಷೇಕ್ ಅಂಬರೀಶ್ ದಾಸನನ್ನು ಭೇಟಿಯಾಗಲು ಜೈಲಿಗೆ ಭೇಟಿ ನೀಡಿದ್ದಾರೆ.
ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದ ಕಚೇರಿಯಲ್ಲಿ ವಿಶೇಷ ಪೂಜೆ, ಹೋಮವನ್ನು ನೆರವೇರಿಸಲಾಗಿದ್ದು, ಸ್ಯಾಂಡಲ್ವುಡ್ನ ಹಲವು ನಟ-ನಟಿಯರು ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈ ಮೂವರು ನಟರು ಆ ಬಳಿಕ ದರ್ಶನ್ರನ್ನು ಪರಪ್ಪನ ಅಗ್ರಹಾರದಲ್ಲಿ ಭೇಟಿ ಮಾಡಿದ್ದಾರೆ.
ದರ್ಶನ್ ಜೈಲು ಪಾಲಾದ ಬಳಿಕ ಇದೀಗ ಬಾರಿಗೆ ನಟ ಅಭಿಷೇಕ್ ಜೈಲಿಗೆ ಭೇಟಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ 2 ಬಾರಿಯಷ್ಟೇ ಭೇಟಿಯಾಗಲು ಅವಕಾಶವಿರುತ್ತದೆ. ಆಗಸ್ಟ್ 12ರಂದು ದರ್ಶನ್ ಕುಟುಂಬ ಜೈಲಿಗೆ ಭೇಟಿ ನೀಡಿ ಮಾತುಕತೆ ನಡೆಸಿತ್ತು. ಇದೀಗ ನಟರಾದ ಧನ್ವೀರ್, ಚಿಕ್ಕಣ್ಣ ಹಾಗೂ ಅಭಿಷೇಕ್ ಅಂಬರೀಷ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.