More

    ಇಂದು BJP ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

    ಬೆಂಗಳೂರು: ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು (ಫೆಬ್ರವರಿ 22) ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

    ಇಂದು ಸಂಜೆ 4.30ಕ್ಕೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎನ್ನಲಾಗಿದೆ. 

    ಇದನ್ನೂ ಓದಿ:  ಸಹೋದರ-ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ಪ್ರಶ್ನೆ: ಪಾಕ್​ ಯೂನಿವರ್ಸಿಟಿ ವಿರುದ್ಧ ಭುಗಿಲೆದ್ದ ಆಕ್ರೋಶ

    ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಇವರು, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಬಿಜೆಪಿ ಸೇರಲಿದ್ದಾರೆ ಎನ್ನುವ ಸುದ್ದಿ ಸಖತ್​​ ಹರಿದಾಡುತ್ತಿದೆ.

    ಸೀಟ್​ ಬೆಲ್ಟ್​ ಧರಿಸಿಲ್ಲ ಅಂತಾ 1000 ರೂ. ದಂಡ! ರೊಚ್ಚಿಗೆದ್ದ ಸ್ಕೂಟರ್​ ಸವಾರ ಹೇಳಿದ್ದಿಷ್ಟು….

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts