More

  ಪ್ರಜ್ವಲ್​​ ರೇವಣ್ಣ ಕೇಸ್​: ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುವುದು ಹಾಸ್ಯಾಸ್ಪದ ಎಂದ ನಟ ಚೇತನ್

  ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಅಲ್ಲದೆ, 2800ಕ್ಕೂ ಅಧಿಕ ವಿಡಿಯೋಗಳು ಪೆನ್​​ಡ್ರೈವ್​ನಲ್ಲಿ ಇದೆ ಎನ್ನಲಾಗುತ್ತಿದೆ. ಪ್ರಸ್ತುತ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಕ್ಷೇತ್ರದಿಂದ ಪ್ರಜ್ವಲ್​ ಮತ್ತೆ ಕಣಕ್ಕಿಳಿದಿರುವುದರಿಂದ ಪೆನ್​ ಡ್ರೈವ್​ ಪ್ರಕರಣ ಹೊಣೆಯನ್ನು ಬಿಜೆಪಿಯು ಸಹ ಹೊರಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ. ಆದರೆ, ಕಾಂಗ್ರೆಸ್​ನ ಈ ನಡೆ ಹಾಸ್ಯಾಸ್ಪದವಾಗಿದೆ ಎಂದು ಸ್ಯಾಂಡಲ್​ವುಡ್​ ನಟ ಹಾಗೂ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಚೇತನ್​ ಅವರು ಅಭಿಪ್ರಾಯಪಟ್ಟಿದ್ದಾರೆ.

  ತಮ್ಮ ಫೇಸ್​ಬುಕ್​ನಲ್ಲಿ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಬರೆದುಕೊಂಡಿರುವ ಚೇತನ್​, ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ತುಂಬಾ ಗಂಭೀರವಾಗಿದ್ದು, ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಆದರೆ, ಪೆನ್​ ಡ್ರೈವ್ ಸಮಸ್ಯೆಯನ್ನು ‘ಸಾವಿರಾರು ನಿರ್ಭಯಾ’ಗಳಿಗೆ ಹೋಲಿಸಿ, ಅದಕ್ಕೆ ಮೋದಿ/ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆಯು ಹಾಸ್ಯಾಸ್ಪದವಾಗಿದೆ ಎಂದು ಚೇತನ್​ ಹೇಳಿದ್ದಾರೆ.

  ಸದ್ಯ ಭಾರಿ ಚರ್ಚೆಯಾಗುತ್ತಿರುವ ಬೃಹತ್ ಲೈಂಗಿಕ ಹಗರಣದಲ್ಲಿ 2800ಕ್ಕೂ ಅಧಿಕ ವಿಡಿಯೋಗಳನ್ನು ಸೆರೆಹಿಡಿದರುವ ಆರೋಪಿ ಪ್ರಜ್ವಲ್ ರೇವಣ್ಣ ನಡೆಯು ನನ್ನನ್ನು ದಿಗ್ಭ್ರಮೆಗೊಳಿಸಿದೆ. ಪೆನ್ ಡ್ರೈವ್​ನಲ್ಲಿರುವ ರಹಸ್ಯ ಸಾರ್ವಜನಿಕವಾಗಿ ಮುನ್ನಲೆಗೆ ಬಂದರೆ, ಅವರ ಪಕ್ಷ, ಕುಟುಂಬ ಮತ್ತು ತಾನು ಎದುರಿಸಬೇಕಾದ ಭೀಕರ ಪರಿಣಾಮಗಳ ಬಗ್ಗೆ ಅವರಿಗೆ ಯಾವುದೇ ಭಯವಿರಲಿಲ್ಲವೇ? ಭಾರತೀಯ ಆಳುವ ರಾಜವಂಶಗಳ ದ್ವೇಷಪೂರಿತ ಅಹಂಕಾರವು ನಿಜಕ್ಕೂ ಆಶ್ಚರ್ಯಕರವಾಗಿದೆ ಎಂದು ಚೇತನ್​ ಅವರು ಬರೆದುಕೊಂಡಿದ್ದಾರೆ.

  ಜೆಡಿಎಸ್​ ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಹಾಸನ ಕ್ಷೇತ್ರದ ಸಂಸದರಾಗಿದ್ದಾರೆ. ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಹಾಸನ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಏಪ್ರಿಲ್​ 26ರಂದು ಮತದಾನವೂ ನಡೆದಿದೆ. ಇದರ ನಡುವೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಹ ಹೊರಬಂದಿವೆ. ಈ ಪ್ರಕರಣ ಇದೀಗ ದೇಶಾದ್ಯಂತ ಭಾರಿ ಸಂಚಲನ ಉಂಟು ಮಾಡಿದೆ. ಮಹಿಳೆರಿಗೆ ಬೆದರಿಕೆ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಮಾಡಿರುವ ಆರೋಪದ ಮೇಲೆ ಪ್ರಜ್ವಲ್​ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ವಹಿಸಿದೆ. ಇದರ ನಡುವೆ ಪ್ರಜ್ವಲ್ ಅವರು ಜರ್ಮನಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

  ಮದುವೆ ಆಗಬಾರದು, ಯಾರ ವಿವಾಹಕ್ಕೂ ಹೋಗಬಾರದು… ನಟಿ ಹನಿ ರೋಸ್ ನಿರ್ಧಾರದ ಹಿಂದಿದೆ ಈ ಕಾರಣ!

  ಪೆನ್​ಡ್ರೖೆವ್ ಪ್ರಕರಣ, ಬಿಜೆಪಿಗೂ ಇಕ್ಕಟ್ಟು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts