More

    ಇನ್ನಷ್ಟು ಬಾರಿ ಜೈಲಿಗೆ ಹಾಕಿದರೂ ಹೆದರಲ್ಲ; ನಟ ಚೇತನ್

    ಬೆಂಗಳೂರು: ಹಿಂದು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್‌ಗೆ ನಗರದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತ್ತು.

    ಇದೀಗ ಜೈಲಿನಿಂದ ಬಿಡುಗಡೆಗೊಂಡ ನಟ ಚೇತನ್​ಗೆ ಪರಪ್ಪನ ಅಗ್ರಹಾರ ಜೈಲಿನ ಬಳಿ ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಹಾರ ಹಾಕಿ ಸ್ವಾಗತ ಲಭಿಸಿದೆ.

    ಬಿಡುಗಡೆಗೊಂಡ ಬಳಿಕ ನಟ ಚೇತನ್‌ ಮತ್ತೆ ವಿವಾದದ ಮಾತುಗಳನ್ನಾಡಿದ್ದು, ಹಿಂದುತ್ವ ಅನ್ನೋದು ಯಾವುದು ಇಲ್ಲ. ಲಿಂಗಾಯುತ ಪ್ರತ್ಯೇಕ ಧರ್ಮ ಕೇಳಿದಂತೆ ಹಿಂದುತ್ವವನ್ನು ಕೇಳಿ. ನಾವು ನಿಮ್ಮ ಜೊತೆಗೆ ನಿಲ್ಲುತ್ತೇವೆ. ಆದ್ರೆ ಹಿಂದುತ್ವವನ್ನು ಬೇರೆ ರೀತಿ ಬಿಂಬಿಸಲಾಗುತ್ತಿದೆ. ಈಗಲೂ ನಾನು ಹೇಳುತ್ತೇನೆ ಇದನ್ನು ಒಪ್ಪಲು ಸಾಧ್ಯ ಇಲ್ಲ. ಇನ್ನಷ್ಟು ಬಾರಿ ಬಂಧಿಸಿದರು ನಾನು ಹೆದರುವುದಿಲ್ಲ. ಹೋರಾಟಗಾರನಿಗೆ ಸೆರೆಮನೆಯೂ ಅರಮನೆಯೇ ಎಂದು ಹೇಳಿಕೊಂಡಿದ್ದಾರೆ.

    ನಟ ಚೇತನ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ೩೨ನೇ ಎಸಿಎಂಎಂ ನ್ಯಾಯಾಧೀಶೆ ಜೆ.ಲತಾ ಅವರು 25 ಸಾವಿರ ರೂ. ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶಿಸಿದ್ದಾರೆ.

    ಅರ್ಜಿದಾರರ ಪರ ವಕೀಲ ಸುನೀಲ್ ಕುಮಾರ್ ಗುನ್ನಾಪುರ ವಾದ ಮಂಡಿಸಿ, ಉರಿಗೌಡ ಮತ್ತು ನಂಜೇಗೌಡ ಎಂಬುವವರು ಟಿಪ್ಪುವನ್ನು ಕೊಂದರು ಎಂಬುದನ್ನು ಬಿಜೆಪಿ ಮತ್ತು ಸಂಘ ಪರಿಹಾರ ಸೃಷ್ಟಿಸಿದ್ದು, ಇದನ್ನು ಚೇತನ್ ಅವರು ಇದು ಒಂದು ಸುಳ್ಳು ಎಂದು ಹೇಳಿದ್ದಾರೆ. ಇದಕ್ಕೆ ಇತಿಹಾಸ ಯಾವುದೇ ದಾಖಲೆ ಇಲ್ಲ ಎಂದು ಒಕ್ಕಲಿಗ ಸಮುದಾಯ ಸ್ವಾಮೀಜಿ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಸುಳ್ಳುಗಳನ್ನು ಪ್ರಶ್ನೆ ಮಾಡಬೇಕು. ಚೇತನ್ ಅವರು ಅದನ್ನು ಮಾಡಿದ್ದಾರೆ. ಒಕ್ಕಲಿಗರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವೈಷಮ್ಯ ಉಂಟು ಮಾಡುವ ಕೃತ್ಯವನ್ನು ಮಾಡಬಾರದು ಎಂದು ಚೇತನ್ ಹೇಳಿದ್ದಾರೆ. ಹೀಗಾಗಿ, ಐಪಿಸಿ ಸೆಕ್ಷನ್ ೨೯೫ ಇಲ್ಲಿ ಅನ್ವಯಿಸುವುದಿಲ್ಲ. ಚೇತನ್ ಇಲ್ಲಿ ಯಾರ ಬಗ್ಗೆಯೂ ಅವರು ಕೆಟ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ. ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯವನ್ನೂ ಚೇತನ್ ಎಸಗಿಲ್ಲ ಎಂದು ವಾದಿಸಿದ್ದರು.

    ಸರ್ಕಾರಿ ಅಭಿಯೋಜಕರು ಚೇತನ್ ಪದೇಪದೆ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ವಿಭಿನ್ನ ಕೋಮುಗಳ ನಡುವೆ ದ್ವೇಷ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಆಕ್ಷೇಪಿಸಿದ್ದರು.

    ಶಿವಕುಮಾರ್ ಎಂಬವರು ನೀಡಿದ ದೂರು ಆಧರಿಸಿ, ಶೇಷಾದ್ರಿಪುರ ಠಾಣೆ ಪೊಲೀಸರು ಚೇತನ್ ವಿರುದ್ಧ ಎ್ಐಆರ್ ದಾಖಲಿಸಿದ್ದರು. ಮಂಗಳವಾರ ಚೇತನ್ ಅವರನ್ನು ಬಂಧಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts