ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವು

Chiranjivi sArja
Published on

ಬೆಂಗಳೂರು: ವಾಯುಪುತ್ರ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಸಾಗರ್​ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಿರ್ಮಾಪಕ ಕೆ.ಮಂಜು ತಿಳಿಸಿದ್ದಾರೆ.

ಸುಮಾರು 22 ಸಿನಿಮಾಗಳಲ್ಲಿ ನಟಿಸಿರುವ ಚಿರು ಸರ್ಜಾ, 2018 ರ ಮೇ ತಿಂಗಳಲ್ಲಿ ಮೇಘನಾ ರಾಜ್​ ಅವರನ್ನು ಮದುವೆಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net