ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ದರ್ಶನ್ ಆಂಡ್ ಗ್ಯಾಂಗ್ನ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ. ಎಲ್ಲ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12 ರವರೆಗೆ 3 ದಿನಗಳ ಕಾಲ ವಿಸ್ತರಣೆ ಮಾಡಿ ಬೆಂಗಳೂರಿನ 24ನೇ ಎಸಿಎಂಎ ನ್ಯಾಯಾಲಯವು ಆದೇಶ ಹೊರಡಿಸಿದೆ.
ಸೋಮವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಸೇರಿ ವಿವಿಧ ಜೈಲಿನಲ್ಲಿರುವ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದರು. ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದ್ದು, ಸೆ.12ಕ್ಕೆ ಮತ್ತೆ ಕೋರ್ಟ್ಗೆ ಹಾಜರಾಗಬೇಕಿದೆ. ಈಗಾಗಲೇ ಚಾರ್ಜ್ಶೀಟ್ ಪ್ರತಿ 17 ಆರೋಪಿಗಳಿಗೂ ಸಿಕ್ಕಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸಲುವ ಸಾಧ್ಯತೆ ಇದೆ. ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ವಕೀಲರ ಜತೆ ರ್ಚಚಿಸಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಮವಾರವೇ ಜಾಮೀನು ಅರ್ಜಿ ಸಲ್ಲಿಕೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಬಳ್ಳಾರಿ ಜೈಲಿಗೆ ಹೋದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್, ದರ್ಶನ್ನಿಂದ ಜಾಮೀನು ವಕಾಲತ್ತಿಗೆ ಸಹಿ ಪಡೆದಿದ್ದರು. ಆರೋಪಿಗಳ ಪರ ವಕೀಲರಿಗೆ ಈಗಾಗಲೇ ಚಾರ್ಜ್ ಶೀಟ್ ಪ್ರತಿ ಸಿಕ್ಕಿದ್ದು, ಇಂದು ಅಥವಾ ಮಂಗಳವಾರ ಜಾಮೀನು ಕೋರಿ ಸೆಷನ್ಸ್ ಕೋರ್ಟ್ಗೆ ಅರ್ಜಿ ಹಾಕುವ ಸಾಧ್ಯತೆ ಇದೆ.
ಚಾರ್ಜ್ಶೀಟ್ ಸಲ್ಲಿಕೆ
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ನ್ಯಾಯಾಲಯಕ್ಕೆ ಸೆ.04ರಂದು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ಅನ್ನು 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಪೊಲೀಸರು ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದೆ. 17 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. 7 ಸಂಪುಟಗಳ, 10 ಕಡತ ಇದೆ. 3991 ಪುಟ ಇದೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. 3 ಸಾಕ್ಷಿದಾರರು ಇದ್ದಾರೆ. ವೈದ್ಯರು, ಆರ್ಟಿಒ ಅಧಿಕಾರಿಗಳು, 56 ಪೊಲೀಸ್ ಸಿಬ್ಬಂದಿ ಸಾಕ್ಷಿದಾರರಾಗಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟಾರೆ 731 ಸಾಕ್ಷಿಗಳ ಉಲ್ಲೇಖ ಮಾಡಲಾಗಿದೆ. 27 ಜನ ಸಾಕ್ಷಿ, ನ್ಯಾಯಾಧೀಶರ ಮುಂದೆ 164, ಪ್ರತ್ಯೇಕ್ಷ ಸಾಕ್ಷಿದಾರರು 03, ಐ ವಿಟ್ನೆಸ್ 03, ಸಿಎಫ್‌ಎಸ್‌ಎಲ್ 08, 59 ಮಂದಿ ಪಂಚರ ಸಾಕ್ಷಿ, ಪೊಲೀಸರು 56, ಸರ್ಕಾರಿ ಅಧಿಕಾರಿಗಳು 8, ಎಫ್‌ಎಸ್‌ಎಲ್, ಸಿಎಫ್‌ಎಸ್‌ಎಲ್ 08, ಪ್ರತ್ಯಕ್ಷ ಸಾಕ್ಷಿಗಳು 03, ಪೊಲೀಸರ ಎದುರು ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಿದ ವ್ಯಕ್ತಿಗಳು 97, ನ್ಯಾಯಾಧೀಶರ ಮುಂದೆ ಸೆಕ್ಷನ್ 164ರ ಅಡಿ ಹೇಳಿಕೆಯನ್ನು 27 ಮಂದಿ ದಾಖಲಿಸಿದ್ದಾರೆ ಎಂದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ದರ್ಶನ್ಗಿಲ್ಲ ಟಿವಿ ದರ್ಶನ
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ಗೆ ಸೆಲ್ನೊಳಗೆ ಟಿವಿ ಸೌಲಭ್ಯ ಸಿಕ್ಕಿಲ್ಲ. ಕೆಲ ದಿನಗಳ ಹಿಂದೆ ಟಿವಿ ಅಳವಡಿಸುವಂತೆ ದರ್ಶನ್, ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಟಿವಿ ದುರಸ್ತಿ ಮಾಡಿಸಬೇಕಿರುವುದರಿಂದ ಸದ್ಯಕ್ಕೆ ಸೆಲ್ಗೆ ಕೇಬಲ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ ಎರಡ್ಮೂರು ದಿನದಲ್ಲಿ ಟಿವಿ ಅಳವಡಿಸಲಾಗುತ್ತದೆ.
ಜೈಲುಪಾಲಾಗಿ ಮೂರು ತಿಂಗಳು
ರೇಣುಕಸ್ವಾಮಿ ಕೊಲೆ ಆಗಿ ಭಾನುವಾರಕ್ಕೆ ಮೂರು ತಿಂಗಳಾಗಿದೆ. ದರ್ಶನ್ ಆಂಡ್ ಗ್ಯಾಂಗ್ ಜೈಲುಪಾಲಾಗಿಯೂ 3 ತಿಂಗಳು ಕಳೆದಿದೆ. ಜೂ.8ರ ಬೆಳಗ್ಗೆ ರೇಣುಕಸ್ವಾಮಿಯನ್ನು ಕಿಡ್ನಾಪ್ ಮಾಡಿ ಸಂಜೆ ಬರ್ಬರವಾಗಿ ಕೊಲೆ ಮಾಡಿದ್ದರು.
ದರ್ಶನ್ಗೆ ಕಾಡುತ್ತಿದೆ ಆ ಭಯ! ಬಳ್ಳಾರಿ ಜೈಲಧಿಕಾರಿಗಳ ಮುಂದೆ ಮತ್ತೊಂದು ಬೇಡಿಕೆ ಇಟ್ಟ ದಾಸ