ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರಿಗೆ ಸದ್ಯಕ್ಕೆ ಜಾಮೀನು ಸಿಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ 14 ದಿನಗಳ ಕಾಲ ವಿಸ್ತರಿಸಿದ್ದು, ದಾಸನ ಗ್ಯಾಂಗ್ ಆಗಷ್ಟ್ 01ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.
ಆರೋಪಿಗಳಿಗೆ ಈ ಹಿಂದೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮುಂದಿನ 14ರಿನಗಳ ಕಾಲ ಅಂದರೆ ಆಗಷ್ಟ್ 01ರ ತನಕ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ. ದಾಸನ ಗ್ಯಾಂಗ್ಗೆ ಜಾಮೀನು ಸಿಗುವುದು ಕಷ್ಟವಾಗಿದ್ದು,. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.
ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.