ಆಗಸ್ಟ್​​ 14ರವರೆಗೆ ದರ್ಶನ್​ಗೆ ಜೈಲೂಟವೇ ಗತಿ; ಪವಿತ್ರಾ ಗೌಡ ಸೇರಿದಂತೆ 17 ಮಂದಿಗೆ ಸೆರೆವಾಸ ಅನಿವಾರ್ಯ

Darshan
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಸಹಚರರಿಗೆ ಸದ್ಯಕ್ಕೆ ಜಾಮೀನು ಸಿಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್​ವಿಸ್ತರಿಸಿದ್ದು, ದಾಸನ ಗ್ಯಾಂಗ್​ ಆಗಸ್ಟ್​​ 14ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.

ಆರೋಪಿಗಳಿಗೆ ಈ ಹಿಂದೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮುಂದಿನ 14ರಿನಗಳ ಕಾಲ ಅಂದರೆ ಆಗಸ್ಟ್​​​ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ. ದಾಸನ ಗ್ಯಾಂಗ್​ಗೆ ಜಾಮೀನು ಸಿಗುವುದು ಕಷ್ಟವಾಗಿದ್ದು,. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.

ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು (ಆಗಸ್ಟ್​​ 01) ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ವಅಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net