ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!

d
Published on

ಬೆಂಗಳೂರು: ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಸೇರಿ ಒಟ್ಟು 13 ಮಂದಿಯನ್ನು ಬಂಧಿಸಿಲಾಗಿದೆ.

ನಗರದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ ಸೇರಿ ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದು ( ಜೂ.11) ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್​ ಅವರ ವೈದಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಗೇಟ್‌ಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್​​ ಮಾಡಲಾಗಿದೆ. ದರ್ಶನ್​ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅನಾರೋಗ್ಯ ಸಮಸ್ಯೆ ಏನಾದರೂ ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net