ಕಾರು ಅಪಘಾತ: ನಟ ದರ್ಶನ್‌ ಇಂದು ಡಿಸ್‌ಚಾರ್ಜ್‌ ಸಾಧ್ಯತೆ

ಮೈಸೂರು: ಕಾರು ಅಪಘಾತದಲ್ಲಿ ಗಾಗಯೊಂಡು ಆಸ್ಪತ್ರೆ ಸೇರಿದ್ದ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರು ಕಳೆದ ಆರು ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ 11.30ರ ಸುಮಾರಿಗೆ ನಟ ದರ್ಶನ್ ಅವರು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆರೋಗ್ಯ ತಪಾಸಣೆ ಬಳಿಕ ವೈದ್ಯರು ಡಿಸ್ಚಾರ್ಜ್ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಐದು ದಿನಗಳಿಂದ ಚಿಕಿತ್ಸೆ ಪಡೆದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದ್ದು, ಗೆಳೆಯ ರಾಯ್ ಆಂಟೋನಿ ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ.

ಭಾನುವಾರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ದರ್ಶನ್‌ಗೆ ಬಲಗೈನ ಮೂಳೆ ಮುರಿದಿತ್ತು. ಅದೇ ಕಾರಿನಲ್ಲಿದ್ದ ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. (ದಿಗ್ವಿಜಯ ನ್ಯೂಸ್)