ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಸಿಗುತ್ತಿದೆ ಎಂಬ ಸುದ್ದಿ ಭಾರಿ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಸ್ಥಳಾಂತರವಾಗಿರುವ ಸುದ್ದಿ ಎಲ್ಲರಿಗೂ ತಿಳಿದೇ ಇದೆ. ಇದರ ನಡುವೆ ಈಗಾಗಲೇ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದು ಡಿ-ಗ್ಯಾಂಗ್ ಕರಾಳ ಕೃತ್ಯ ಒಂದೊಂದಾಗಿ ಬಯಲಾಗುತ್ತಿದೆ.
ತಾಜಾ ಸಂಗತಿ ಏನೆಂದರೆ, ಕೆಲ ದಿನಗಳ ಹಿಂದೆ ಬಳ್ಳಾರಿ ಜೈಲು ಅಧಿಕಾರಿಗಳ ಬಳಿ ಟಿವಿ, ಸರ್ಜಿಕಲ್ ಚೇರ್ ಮತ್ತು ವೆಸ್ಟರ್ನ್ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡುವಂತೆ ಬೇಡಿಕೆ ಇಟ್ಟಿದ್ದ ದರ್ಶನ್, ಇದೀಗ ಮತ್ತೊಂದು ಬೇಡಿಕೆ ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಜೈಲಿನಲ್ಲಿರುವ ದಾಸನಿಗೆ ಫಿಟ್ನೆಸ್ ಕಾಯ್ದುಕೊಳ್ಳುವುದೇ ದೊಡ್ಡ ಚಿಂತೆಯಾಗಿದೆ. ಹೀಗಾಗಿ ಅನ್ನಕ್ಕೆ ಬ್ರೇಕ್ ಹಾಕಿರುವ ದರ್ಶನ್, ಚಪಾತಿ, ಮುದ್ದೆ ಮತ್ತು ವಿಟಮಿನ್ಸ್ ಮಾತ್ರೆಗಳ ಮೊರೆ ಹೋಗಿದ್ದಾರೆ. ಆದರೆ, ಜೈಲಿನಲ್ಲಿ ನೀಡುತ್ತಿರುವ ಚಪಾತಿ ದಾಸನಿಗೆ ಸಾಕಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ಚಪಾತಿ ನೀಡುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ಆದರೆ, ಜೈಲಿನ ಆಹಾರ ಮೆನು ಪ್ರಕಾರ ಪ್ರತಿ ಕೈದಿಗೆ ಇಂತಿಷ್ಟೇ ಆಹಾರ ನೀಡಬೇಕೆಂಬ ನಿಯಮವಿದೆ. ಆದರೆ, ಅದನ್ನು ಮೀರಿ ದರ್ಶನ್ ಹೆಚ್ಚಿನ ಚಪಾತಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ದೇಹದ ಫಿಟ್ನೆಸ್ ನಿರ್ವಹಣೆ ಮಾಡಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಚಪಾತಿ ನೀಡಿ ಎಂದು ದರ್ಶನ್ ಮನವಿ ಮಾಡಿದ್ದಾರೆ. ದೇಹದ ತೂಕ ಕಳೆದುಕೊಳ್ಳುವ ಭಯ ದರ್ಶನ್ ಅವರಲ್ಲಿ ಕಾಡುತ್ತಿದೆ. ಸಾಮಾನ್ಯವಾಗಿ ಜಿಮ್ ಮಾಡಿದವರು ಕೂಡಲೇ ವರ್ಕೌಟ್ ಬಿಟ್ಟರೆ ಚರ್ಮ ಜೋತು ಬಿದ್ದು ವಿಲಕ್ಷಣವಾಗಿ ಕಾಣುತ್ತದೆ. ಹೀಗಾಗಿ ದಾಸ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಲು ಮುಂದಾಗಿದ್ದು, ಹೆಚ್ಚಿನ ಚಪಾತಿ ಕೇಳುತ್ತಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿ ಎರಡು ವಾರಗಳಾಗಿವೆ. ಜೈಲಿನಲ್ಲಿದ್ದರೂ ದರ್ಶನ್ ತಮ್ಮ ದೇಹವನ್ನು ಸದೃಢವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ದರ್ಶನ್ ಇಟ್ಟ ಬೇಡಿಕೆ ಎಲ್ಲ ಪೂರೈಸಲು ಸಾಧ್ಯವಿಲ್ಲ ಎಂಬ ಮಾಹಿತಿ ಇದೆ. ಜೈಲಿನ ಮಾರ್ಗಸೂಚಿಗೆ ಅನುಸಾರವಾಗಿ ಬೇಡಿಕೆ ಇದ್ದರೆ ಮಾತ್ರ ಪೂರೈಸಲಾಗುತ್ತದೆ. ಆದರೆ, ದರ್ಶನ್ ಇಡುತ್ತಿರುವ ಬೇಡಿಕೆಗಳು ನಿಯಮಗಳನ್ನು ಮೀರಿದ್ದು, ಸದ್ಯಕ್ಕೆ ಬೇಡಿಕೆ ಪೂರೈಕೆ ಅಸಾಧ್ಯ ಎನ್ನಲಾಗುತ್ತಿದೆ.
ಚಾರ್ಜ್ಶೀಟ್ ಸಲ್ಲಿಕೆ
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ನ್ಯಾಯಾಲಯಕ್ಕೆ ಸೆ.04ರಂದು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ಅನ್ನು 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಪೊಲೀಸರು ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದೆ. 17 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. 7 ಸಂಪುಟಗಳ, 10 ಕಡತ ಇದೆ. 3991 ಪುಟ ಇದೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. 3 ಸಾಕ್ಷಿದಾರರು ಇದ್ದಾರೆ. ವೈದ್ಯರು, ಆರ್ಟಿಒ ಅಧಿಕಾರಿಗಳು, 56 ಪೊಲೀಸ್ ಸಿಬ್ಬಂದಿ ಸಾಕ್ಷಿದಾರರಾಗಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟಾರೆ 731 ಸಾಕ್ಷಿಗಳ ಉಲ್ಲೇಖ ಮಾಡಲಾಗಿದೆ. 27 ಜನ ಸಾಕ್ಷಿ, ನ್ಯಾಯಾಧೀಶರ ಮುಂದೆ 164, ಪ್ರತ್ಯೇಕ್ಷ ಸಾಕ್ಷಿದಾರರು 03, ಐ ವಿಟ್ನೆಸ್ 03, ಸಿಎಫ್‌ಎಸ್‌ಎಲ್ 08, 59 ಮಂದಿ ಪಂಚರ ಸಾಕ್ಷಿ, ಪೊಲೀಸರು 56, ಸರ್ಕಾರಿ ಅಧಿಕಾರಿಗಳು 8, ಎಫ್‌ಎಸ್‌ಎಲ್, ಸಿಎಫ್‌ಎಸ್‌ಎಲ್ 08, ಪ್ರತ್ಯಕ್ಷ ಸಾಕ್ಷಿಗಳು 03, ಪೊಲೀಸರ ಎದುರು ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಿದ ವ್ಯಕ್ತಿಗಳು 97, ನ್ಯಾಯಾಧೀಶರ ಮುಂದೆ ಸೆಕ್ಷನ್ 164ರ ಅಡಿ ಹೇಳಿಕೆಯನ್ನು 27 ಮಂದಿ ದಾಖಲಿಸಿದ್ದಾರೆ ಎಂದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಪವಿತ್ರಾ ಗೌಡ ನಿಮಗೆ ಏನಾಗಬೇಕು? ವಿಚಾರಣೆ ವೇಳೆ ದರ್ಶನ್ ಕೊಟ್ಟ ಉತ್ತರ ಚಾರ್ಜ್‌ಶೀಟ್‌ನಲ್ಲಿ ಬಯಲು
ಪವಿತ್ರಾ ಬಳಿ ರೇಣುಕಾಸ್ವಾಮಿ ಇಷ್ಟೆಲ್ಲ ಕೇಳಿದ್ನಾ? ಚಾರ್ಜ್ಶೀಟ್ನಲ್ಲಿರುವ ಸಂಪೂರ್ಣ ಇನ್ಸ್ಟಾ ಚಾಟಿಂಗ್ ಹೀಗಿದೆ…