More

    ವಿಜಯಲಕ್ಷ್ಮೀ ದರ್ಶನ್ V/s ಪವಿತ್ರಾ ಗೌಡ; ಬೀದಿಗೆ ಬಂತು ಸಂಸಾರ ಗಲಾಟೆ

    ಬೆಂಗಳೂರು: ನಟ ದರ್ಶನ್​​ ಅವರ ಹೆಸರಿನ ಜತೆ ತಳಕುಹಾಕಿಕೊಂಡಿರುವ ಹೆಸರು ಪವಿತ್ರಾ ಗೌಡ. ಕಳೆದ ಕೆಲವು ದಿನಗಳಿಂದ ಈ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪವಿತ್ರಾ ಗೌಡ ದರ್ಶನ್‌ ಜೊತೆಗಿರುವ ಒಂದೊಂದೆ ಫೋಟೋ ಅಪ್ಲೋಡ್ ಮಾಡಿ ಸುಳಿವು ನೀಡುತ್ತಿದ್ದರು. ದರ್ಶನ್ ಮತ್ತು ಪವಿತ್ರಾ ಗೌಡ ಬಗ್ಗೆ ಗುಸುಗುಸು ಕೇಳಿಬರುತ್ತಿರುವಾಗಲೇ ದರ್ಶನ್ ಜತೆಗಿನ ಫೋಟೋ ಶೇರ್ ಮಾಡುವ ಮೂಲಕ ಎಲ್ಲರ ಹುಬ್ಬೇರಿಸಿದ್ದರು. ದರ್ಶನ್ ಜತೆ ಪವಿತ್ರಾ ಆಪ್ತವಾಗಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಇದೀಗ ದರ್ಶನ್​ ಅವರ ಪತ್ರಿ ವಿಜಯಲಕ್ಷ್ಮೀ  ಹಾಗೂ 10 ವರ್ಗಷಗಳಿಂದ ಜತೆಗೆ ಇದ್ದೇನೆ ಎಂದು ಹೇಳುತ್ತಿರುವ ಪವಿತ್ರಾ ಗೌಡ ಮಧ್ಯೆ ಮನಸ್ತಾಪದ ಗಾಳಿ ಬಿಸಿದೆ. ಇಬ್ಬರು ಇನ್ಸ್ಟಾಗ್ರಾಮ್​​ನಲ್ಲಿ ಫೋಟೋ ಹಾಗೂ ಕೆಲವು ವಿಚಾರ ಶೇರ್ ಮಾಡಿಕೊಳ್ಳುವ ಮೂಲಕವಾಗಿ ಒಬ್ಬರಮೇಲೊಬ್ಬರು ಕಿಡಿಕಾರುತ್ತಿದ್ದಾರೆ.

    ನಮ್ಮಿಬ್ಬರ ಸಂಬಂಧ 10 ವರ್ಷ ಪೂರೈಸಿದೆ. ಥ್ಯಾಂಕ್​ ಯು ಎಂದು ಹೇಳಿ ದರ್ಶನ್ ಜತೆಗಿನ ಫೋಟೋಗಳನ್ನು ಶೇರ್​ ಮಾಡಿಕೊಂಡು​ ಇನ್​ಸ್ಟಾಗ್ರಾಂನಲ್ಲಿ ದರ್ಶನ್​ಗೂ ಪವಿತ್ರಾ ಗೌಡಾ ಟ್ಯಾಗ್​ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಇನ್​​ಸ್ಟಾಗ್ರಾಂ ಮೂಲಕ ಧ್ವನಿ ಎತ್ತಿದ್ದು, ದೂರು ನೀಡುವುದಾಗಿ ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ್ದಾರೆ.

    ವಿಜಯಲಕ್ಷ್ಮೀ ಹೇಳಿದ್ದೇನು?: ಬೇರೊಬ್ಬರ ಪತಿಯ ಫೋಟೋವನ್ನು ಪೋಸ್ಟ್​ ಮಾಡುವ ಮುನ್ನ ಈ ಮಹಿಳೆ(ಪವಿತ್ರಾ ಗೌಡ)ಗೆ ತನ್ನ ಪ್ರಜ್ಞೆ ಇರಬೇಕು ಎಂದು ನಾನು ಭಾವಿಸುತ್ತೇನೆ. ಈ ರೀತಿ ಪೋಸ್ಟ್​ ಮಾಡುವುದು ಆಕೆಯ ವ್ಯಕ್ತಿತ್ವ, ನಡತೆ ಮತ್ತು ನೈತಿಕ ನಿಲುವಿನ ಬಗ್ಗೆ ಹೇಳುತ್ತದೆ. ಆ ಪುರುಷ ವಿವಾಹಿತನಾಗಿದ್ದರೂ ಆಕೆ ಇನ್ನೂ ಕೂಡ ತನ್ನ ವೈಯಕ್ತಿಕ ಅಗತ್ಯತೆಗಳು ಮತ್ತು ಅಜೆಂಡಾ ಈಡೇರಿಕೆಗಾಗಿ ಅದನ್ನೇ ಮುಂದುವರಿಸಲು ಆಯ್ಕೆ ಮಾಡಿಕೊಂಡಿದ್ದಾಳೆ. ಖುಷಿ ಗೌಡ, ಪವಿತ್ರಾ ಗೌಡ ಹಾಗೂ ಸಂಜಯ್​ ಸಿಂಗ್​ ಮಗಳು ಎಂಬುದನ್ನು ಈ ಫೋಟೋಗಳು ಸ್ಪಷ್ಟವಾಗಿ ನಿರೂಪಿಸುತ್ತವೆ. ಸಾಮಾನ್ಯವಾಗಿ ನಾನು ವೈಯಕ್ತಿಕ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತುವುದಿಲ್ಲ. ಆದರೆ, ನನ್ನ ಕುಟುಂಬ ಹಿತಾಸಕ್ತಿಗಾಗಿ ಧ್ವನಿ ಎತ್ತಲು ಇದು ಸೂಕ್ತ ಸಮಯ ಎಂದು ನನಗೆ ಅನಿಸುತ್ತಿದೆ. ಫೋಟೋಗಳನ್ನು ಶೇರ್​ ಮಾಡುವ ಮೂಲಕ ಸಮಾಜಕ್ಕೆ ಬೇರೆ ಕಲ್ಪನೆ ಬಿತ್ತುತ್ತಿರುವ ಜನರ ವಿರುದ್ಧ ನಾನು ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತೇನೆ ಎಂದು ಪವಿತ್ರಾ ಗೌಡ ಮತ್ತು ಸಂಜಯ್​ ಸಿಂಗ್​ ಫೋಟೋಗಳ ಸಮೇತ ಖಡಕ್​ ಎಚ್ಚರಿಕೆ ನೀಡಿರುವ ವಿಜಯಲಕ್ಷ್ಮೀ, ಸಂಜಯ್​ ಸಿಂಗ್​, ಖುಷಿಗೌಡ ಹಾಗೂ ಪವಿತ್ರಾ ಗೌಡಗೆ ಟ್ಯಾಗ್​ ಮಾಡಿದ್ದಾರೆ.

    ಪವಿತ್ರಾ ಗೌಡಾ ಹೇಳಿದ್ದೇನು?: ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ ಕೆಲವು ಸಮಸ್ಯೆಯಿಂದ ಇಂದ ನಾನು ಸಂಜಯ್ ಅವರಿಂದ ಡಿವೊರ್ಸ್​​ ಪಡೆದಿದ್ದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ. ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ದಯವಿಟ್ಟು ಇದನ್ನು ಗಮನಿಸಿ “I’m not here for any own personal needs and agenda”ಇದು 10 ವರ್ಷಗಳ ಕಾಲ ಶುದ್ಧ ಪ್ರೀತಿ ಮತ್ತು ಕಾಳಜಿಯ ಬಗ್ಗೆ ಇದು ಸುಲಭವಲ್ಲ ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು ಸಾಕ್ಷಿ ಹಾಗೂ ನನ್ನ ನನ್ನ ವಿಚ್ಛೇದನದ ಪತ್ರವನ್ನು ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ  ಪೋಸ್ಟ್​​ಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ ಇನ್​ಸ್ಟಾಗ್ರಾಮ್​​ನಲ್ಲಿ ಬಹಳಷ್ಟು ಜನ  ಕೆಟ್ಟ ಪದಗಳಿಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ ವಯಕ್ತಿಕ ಪೋಟೋಗಳು ಶೇರ್​ ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ ಕಾನೂನು ಕ್ರಮ ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ..ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before,I came in to his life,. plz Recalll it 🙏 @viji_darshsn ಅವರನ್ನು ಟ್ಯಾಗ್​ ಮಾಡಿದ್ದಾರೆ.

    ದರ್ಶನ್​ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್​​ ಅವರ ಜತೆ 10 ವರ್ಷಗಳಿಂದ ಜತೆಗೆ ಇದ್ದೇನೆಂದು ಹೇಳುತ್ತಿರುವ ಪವಿತ್ರಾ ಗೌಡ ಮಧ್ಯೆ ಸಂಸಾರ ಗಲಾಟೆ ನಡೆಯುತ್ತಿದೆ. ಇಬ್ಬರು ಸೋಶಿಯಲ್​ ಮೀಡಿಯಾ ಮೂಲಕವಾಗಿ ಒಬ್ಬರಮೇಲೊಬ್ಬರು ಕೆಲವು ವಿಚಾರಗಳನ್ನೂ ದೂರುತ್ತಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಡಿ ಬಾಸ್​​ ಅಭಿಮಾನಿಗಳು ಸಪೂರ್ಟ್​​ ಮಾಡುತ್ತಿದ್ದಾರೆ. ಹಾಗೆ ಪವಿತ್ರಾ ಗೌಡಾ ಅವರ ಕುರಿತಾಗಿ ಬೇಸರ ಹೊರಹಾಕುತ್ತಿದ್ದಾರೆ. ಆದರೆ ಇಷ್ಟೆಲ್ಲ ನಡೆಯುತ್ತಿದ್ದರು ದರ್ಶನ್​​ ಮಾತ್ರ ಎಲ್ಲೂ ಈ ಕುರಿತಾಗಿ ಮಾತನಾಡಿಲ್ಲ ಅಥವಾ ಸೋಶಿಯಲ್​​ ಮೀಡಿಯಾದಲ್ಲೂ ರಿಯ್ಯಾಕ್ಟ್​​ ಮಾಡಿಲ್ಲ. ಈ ಸಂಸಾರ ಗಲಾಟೆ ಗಾಂಧಿನಗರದಲ್ಲಿ ಹಾಟ್​​ ಟಾಪಿಕ್​​ ಆಗಿದೆ.

    “ಡೋಲೋ 650 ಮಾತ್ರೆ, ಬಿಸಿ ರಾಗಿ ಮುದ್ದೆ” ಖ್ಯಾತಿ ಶಶಿರೇಖಾ ಈಗ ಕನ್ನಡ ಸಿನಿಮಾ ಹೀರೋಯಿನ್

    ಬ್ರಾಹ್ಮಣ ಸಮುದಾಯದಲ್ಲಿ ಹುಟ್ಟಿ ಆಡಿ ಬೆಳೆದ ಕನ್ನಡದ ನಟಿ ಈಗ ಕ್ರೈಸ್ತ ಧರ್ಮದ ಕೌನ್ಸಿಲರ್

    ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?

    ಖುಷಿ..ದರ್ಶನ್ ಮಗಳೆಂದು ನಾನು ಹೇಳಿಲ್ಲ; ನನಗೂ ಕಾನೂನು ಹೋರಾಟ ಮಾಡುವ ಹಕ್ಕಿದೆ..ಎಚ್ಚರಿಕೆ ನೀಡಿದ ಪವಿತ್ರಾ ಗೌಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts