ಮೈಸೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿ ಸದ್ಯ ರೆಗ್ಯೂಲರ್ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್ (Darshan) ಕುಟುಂಬಸ್ಥರೊಂದಿಗೆ ಮೈಸೂರಿನ ಫಾರ್ಮ್ಹೌಸ್ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗಿದೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ನೆಚ್ಚಿನ ನಟನ ಪೋಸ್ಟ್ಗೆ ಅಭಿಮಾನಿಗಳು ಕಮೆಂಟ್ ಹಾಕಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
View this post on Instagram
A post shared by Darshan Thoogudeepa Shrinivas (@darshanthoogudeepashrinivas)
ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ಹಬ್ಬದ ಪ್ರಯುಕ್ತ ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ.
ದರ್ಶನ್ ಪ್ರತಿವರ್ಷವೂ ಸಂಕ್ರಾಂತಿ ಹಬ್ಬವನ್ನು ತಮ್ಮ ಫಾರಂ ಹೌಸ್ನಲ್ಲಿ ಆಚರಣೆ ಮಾಡುತ್ತಾರೆ. ಫಾರಂ ಹೌಸ್ನಲ್ಲಿರುವ ಎತ್ತುಗಳು, ಹಸು, ಕುದುರೆ ಇನ್ನಿತರೆ ಪ್ರಾಣಿಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿಸಿ ಅವುಗಳನ್ನು ಬೆಂಕಿ ಹಾಯಿಸುತ್ತಾರೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರುಗಳು ಫಾರಂ ಹೌಸ್ನಲ್ಲಿ ಪ್ರಾಣಿಗಳನ್ನು ಆರೈಕೆ ಮಾಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ನಟ ದರ್ಶನ್ ಅವರು ಪೋಸ್ಟ್ ಮಾಡಿದ್ದು, ಅಭಿಮಾನಿಗಳ ಸಂಭ್ರಮವನ್ನು ಡಬಲ್ ಮಾಡಿದೆ.
ಅಸಂಬದ್ಧ ಪ್ರಶ್ನೆ ಕೇಳಿದ ಯೂಟ್ಯೂಬರ್ನನ್ನು ಹಿಗ್ಗಾಮುಗ್ಗಾ ಥಳಿಸಿದ ನಾಗಾಸಾಧು; Video Viral
ನಮ್ಮ ವಿರುದ್ಧ ಮಾತ್ರ ಆತನದ್ದು… Virat Kohli ಕುರಿತು ಶಾಕಿಂಗ್ ಹೇಳಿಕೆ ಪಾಕ್ ಮಾಜಿ ಕ್ರಿಕೆಟಿಗ