ನಟ ದರ್ಶನ್​ಗೆ ಜೈಲೂಟವೇ ಗತಿ; ಮನೆ ಊಟ ಕೊಡುವಂತೆ ಸಲ್ಲಿಸಿದ್ದ ಅರ್ಜಿ ವಜಾ…

Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ  ನಟ ದರ್ಶನ್ ಮನೆ ಊಟದ ಜೊತೆಗೆ, ಹಾಸಿಗೆ, ಬಟ್ಟೆಯನ್ನು ಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು . ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಜೈಲು ಊಟವೇ ಗತಿಯಾಗಿದೆ.

ಜೈಲು ಸೇರಿರುವ ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಪರ ವಕೀಲ ರಾಘವೇದ್ರ ಅವರು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ವಿಶ್ವನಾಥ್.ಸಿ. ಗೌಡರ್ ಅವರ ಮುಂದೆ ನಟ ದರ್ಶನ್ ಪರ ವಕೀಲ ರಾಘವೇಂದ್ರ ವಾದ ಮಂಡನೆ ಮಾಡಿದ್ದಾರೆ.

ಜೈಲಿನಲ್ಲಿರುವ ವಿಚಾರಾಣಾಧೀನ ಖೈದಿಗಳು ಮನೆಯಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶ ಇದೆ. ಹೊರಗಿನಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶ ನೀಡುವ ಅಧಿಕಾರ ಜೈಲು ಐಜಿಪಿಗೆ ನೀಡಲಾಗಿದೆ. ತಮ್ಮ ಸೌಲಭ್ಯಗಳನ್ನು ತಾವು ಪಡೆದುಕೊಳ್ಳಲು ಆಗದೇ ಇದ್ದಾಗ ಮಾತ್ರ ಜೈಲು ಅಥಾರಿಟಿ ನೀಡಬಹುದು ಎಂದು ಕಾನೂನು ಮಾಡಲಾಗಿದೆ ಎಂದು ವಾದ ಮಂಡನೆ ಮಾಡಿದ್ದರು.  ಜೈಲಿನಲ್ಲಿ ನೀಡುವಂತಹ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದಿದ್ದಾಗ ನಟ ದರ್ಶನ್ ಆರೋಗ್ಯ ಹದಗೆಟ್ಟಿತ್ತು. ಅವರ ತೂಕದಲ್ಲಿಯೂ ಇಳಿಕೆಯಾಗಿತ್ತು. ಹೀಗಾಹಿ ಜೈಲು ಅಧಿಕಾರಿಗಳಿಗೆ ನಿರ್ದೆಶನವನ್ನು ನಟ ದರ್ಶನ್ ಕೋರಿದ್ದರು.

ಆದರೆ, ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಆದೇಶವನ್ನು ಜು.25ಕ್ಕೆ ಕಾಯ್ದಿರಿಸಿದ್ದರು. ಇಂದು ಮಧ್ಯಾಹ್ನ ದರ್ಶನ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ನಟ ದರ್ಶನ್‌ ಮನೆ ಊಟ, ಮನೆಯ ಹಾಸಿಗೆ ಹಾಗೂ ಪುಸ್ತಕ ನೀಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.

ಮನೆ ಊಟ ಸೌಲಭ್ಯ ಪಡೆಯುವ ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಶಾಕ್ ನೀಡಲಾಗಿದೆ. ಇನ್ನು ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಗೆ ಯಾವುದೇ ವಿಶೇಷ ಸೌಲಭ್ಯ ಇಲ್ಲ. ಸಾಮಾನ್ಯ ಕೈದಿಗಳಿಗೆ ನೀಡುವ ಊಟವೇ ದರ್ಶನ್ ಗೆ ನೀಡಲಾಗುತ್ತದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳನ್ನಿಟ್ಟು ದರ್ಶನ್‌ ಅರ್ಜಿ ವಜಾಗೊಂಡಿದೆ.

TAGGED:
Share This Article

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ಅಪ್ಪಿತಪ್ಪಿಯೂ ಭಾನುವಾರದಂದು ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ! ದೇವರ ಕೋಪಕ್ಕೆ ಗುರಿಯಾಗ್ತೀರ ಹುಷಾರ್​

ಬೆಂಗಳೂರು: ಭಾನುವಾರ ಸಾಮಾನ್ಯವಾಗಿ ರಜಾ ದಿನ. ಇದು ಎಲ್ಲರಿಗೂ ತಿಳಿದಿದೆ. ಆದ್ದರಿಂದಲೇ ಇಂದು ಬಹುತೇಕ ಎಲ್ಲರೂ…

ಕೊಲೆಸ್ಟ್ರಾಲ್ ವಿಚಾರದಲ್ಲಿ ಹರಿದಾಡುತ್ತಿರುವ ಈ 3 ಸುಳ್ಳುಗಳನ್ನು ಎಂದಿಗೂ ನಂಬಲೇಬೇಡಿ…

ಆರೋಗ್ಯ ವಿಚಾರದಲ್ಲಿ ನೀವು ತಿಳಿಯದೇ ಮಾಡುವ ಕೆಲ ತಪ್ಪುಗಳು ನಿಮ್ಮ ಆರೋಗ್ಯವನ್ನೇ ಹಾಳು ಮಾಡುತ್ತದೆ. ಇಂದು…