More

    ಅರ್ಜುನನ ಸಮಾಧಿ ಕುರಿತಂತೆ ಧ್ವನಿ ಎತ್ತಿದ ದಾಸ; ಸರ್ಕಾರಕ್ಕೆ ನಟ ದರ್ಶನ್​ ಕೋರಿಕೆ ಏನು?

    ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನ ಕಳೆದ ವರ್ಷ ಡಿಸೆಂಬರ್​ 04ರಂದು ನಡೆದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿತ್ತು. ಇದೀಗ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್​ ಧ್ವನಿ ಎತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

    ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ದರ್ಶನ್, ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಬರೆದುಕೊಂಡಿದ್ದಾರೆ.

    ಸ್ವತಃ ಪ್ರಾಣಿಪ್ರಿಯರಾಗಿರುವ ನಟ ದರ್ಶನ ತಮ್ಮ ಮನೆ ಹಾಗೂ ಫಾರ್ಮ್​​ಹೌಸ್​ನಲ್ಲಿ ವಿವಿಧ ತಳಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಮೈಸೂರು ಮೃಗಾಲಯ ಸೇರಿದಂತೆ ಅನೇಕ ಕಡೆ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. 2023ರ ವರ್ಷಾಂತ್ಯದಲ್ಲಿ ತೆರೆಕಂಡ ಕಾಟೇರ ಚಿತ್ರ ಶುರುವಾಗುವ ಮುನ್ನ ‘ನಾಡ ದೇವಿ ಚಾಮುಂಡಿಯ ಅಂಬಾರಿಯನ್ನು ಹೊತ್ತು ದಸರೆಯ ವೈಭವವನ್ನು ಜಗತ್ತಿನಾದ್ಯಂತ ಕಣ್ತುಂಬಿಸಿ ಕಣ್ಮರೆಯಾದ ದೈತ್ಯ ಮತ್ತು ದೈವ ಜೀವ ಅರ್ಜುನನಿಗೆ ನಮ್ಮ ಕಾಟೇರ ಚಿತ್ರ ಅರ್ಪಣೆ’ ಎಂದು ಬರೆದುಕೊಳ್ಳುವ ಮೂಲಕ ತಮ್ಮ ಪ್ರಾಣಿಪ್ರೀತಿಯನ್ನು ತೋರ್ಪಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts