More

  ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್​ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ

  ಬೆಂಗಳೂರು: ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವವರ ಕೊಲೆಯಾಗಿದ್ದು, ಆ ಪ್ರಕರಣದಲ್ಲಿ ದರ್ಶನ್‌ ಹೆಸರು ತಳುಕು ಹಾಕಿಕೊಂಡಿದೆ. ಈ ಸಂಬಂಧ ಈಗಾಗಲೇ ನಟ ದರ್ಶನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  ಇದನ್ನೂ ಓದಿ: ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

  ಇದರ ನಡುವೆ ನಟಿ ರಮ್ಯಾ, ದರ್ಶನ್​ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ.
  ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ಪೋಸ್ಟ್​​ ಮಾಡಿರುವ ರಮ್ಯಾ, ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

  ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

  ‘ದರ್ಶನ್​ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.

  ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು. ನಟಿ ರಮ್ಯಾ ಹಾಗೂ ದರ್ಶನ್ ‘ದತ್ತ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾ ದೊಡ್ಡ ಹಿಟ್ ಆಗಿತ್ತು.

  ಘಟನೆ ಹಿನ್ನಲೆ ಇಲ್ಲಿದೆ..?

  ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು.

  ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಅವರನ್ನು ಜೂನ್‌ 9 ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಬಳಿಕ ಆರೋಪಿಗಳು ಕಾಮಾಕ್ಷಿಪಾಳ್ಯ ರಿಂಗ್‌ ರೋಡ್‌ ಬಳಿ ಇರುವ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ ಮುಂದಿರುವ ಮೋರಿಯಲ್ಲಿ ಶವವನ್ನು ಎಸೆದಿದ್ದರು. ಈ ಬಗ್ಗೆ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಇತ್ಯಾದಿ ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಆರೋಪಿಗಳನ್ನು ಬಂಧಿಸಿದ್ದರು. ಬಂಧನ ಮಾಡಿದ ಆರೋಪಿಗಳ ವಿವರ ಕಲೆ ಹಾಕಿದಾಗ ಅವರು ದರ್ಶನ್‌ ಬಾಡಿಗಾರ್ಡ್‌ಗಳು ಎಂಬ ಶಾಕಿಂಗ್‌ ವಿಚಾರ ಗೊತ್ತಾಗಿದೆ.

  ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ರೈಲು ಸೇವೆ ಸ್ಥಗಿತ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts