

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಜೈಲು ಸೇರಿ ಮಧ್ಯಂತರ ಜಾಮೀನಿನ ಹೊರ ಬಂದಿರುವ ನಟ ದರ್ಶನ್ (Darshan) ಸದ್ಯ ಬೆನ್ನು ನೋವಿನ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ನಿಗಾ ವಹಿಸಿದ್ದಾರೆ. ಇತ್ತ ನಟ ದರ್ಶನ್ಗೆ ನೀಡಲಾಗಿರುವ ಮಧ್ಯಂತರ ಜಾಮೀನಿನ ಅವಧಿ ಮುಂದಿನ ವಾರ ಮುಕ್ತಾಯವಾಗಲಿದ್ದು, ಇದರ ಬೆನ್ನಲ್ಲೇ ನಟ ದರ್ಶನ್ಗೆ ಸಂಬಂಧಿಸಿದ ಫೋಟೋ ಒಂದು ವೈರಲ್ (Photo Viral) ಆಗಿದೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ರನ್ನು ರಾಜಾತಿಥ್ಯ ಪಡೆದ ಆರೋಪದ ಮೇಲೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಆ ಬಳಿಕ ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲಿದ್ದ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನಿನ್ನು ನೀಡಿ ಪ್ರತಿವಾರ ಮೆಡಿಕಲ್ ರಿಪೋರ್ಟ್ ಸಲ್ಲಿಸುವಂತೆ ಸೂಚಿಸಿತ್ತು.
ಅದರಂತೆ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಅವರಿಗೆ ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದ್ದರು. ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೂಡ ವೈದ್ಯರು ನೀಡಿದ್ದರು. ರಕ್ತದೊತ್ತಡ ಅಧಿಕವಾಗಿರುವ ಕಾರಣ ನಟ ದರ್ಶನ್ಗೆ ಇನ್ನೂ ಶಸ್ತ್ರಚಿಕಿತ್ಸೆ ಮಾಡಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಇದರ ನಡುವೆಯೇ ದರ್ಶನ್ ಆಸ್ಪತ್ರೆಯಲ್ಲಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಧ್ಯಂತರ ಜಾಮೀನಿನ ಅವಧಿ ಮುಂದಿನ 09 ದಿನಗಳಲ್ಲಿ ಮುಕ್ತಾಯವಾಗಲಿದ್ದು, ಒಂದು ವೇಳೆ ರೆಗ್ಯೂಲರ್ ಜಾಮೀನು ಸಿಗದಿದ್ದರೆ ಅವರು ಜೈಲಿಗೆ ಮರಳಬೇಕಾಗುತ್ತದೆ. ಇದೆಲ್ಲದರ ನಡುವೆ ಇದೀಗ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಂದಿನ ದಿನಗಳಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.
ಸದ್ಯ ದರ್ಶನ್ ಆಸ್ಪತ್ರಯಲ್ಲಿರುವ ಫೋಟೋ ವೈರಲ್ ಆಗುತ್ತಿದ್ದು, ಆಸ್ಪತ್ರೆಯ ಬೆಡ್ ಮೇಲೆ ದರ್ಶನ್ ಅವರು ಮಲಗಿರುವ ಫೋಟೋ ವೈರಲ್ ಆಗುತ್ತಿದೆ. ಸದ್ಯ ವೈರಲ್ ಆಗುತ್ತಿರುವ ಈ ಫೋಟೊದಲ್ಲಿ ದಾಸನ ಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ದಾಸ ಶೀಘ್ರವೇ ಗುಣಮುಕರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.