ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ( darshan ) ಫೆಬ್ರವರಿ 16 ರಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್ವುಡ್ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಅವರ ಅಪಾರ ಅಭಿಮಾನಿಗಳು ತುಂಬು ಹೃದಯದಿಂದ ಶುಭಾಶಯ ಕೋರಿದರು.
ಬರ್ತಡೇ ಸಂಭ್ರಮ ಮುಗಿದು ಎರಡು ದಿನಗಳ ಬಳಿಕ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಪ್ರೀತಿ, ಸಹಕಾರ ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಫ್ಯಾನ್ಸ್ಗೆ ದರ್ಶನ್ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?: ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾 ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ ಎಂದಿದ್ದಾರೆ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ( darshan )
View this post on Instagram
A post shared by Darshan Thoogudeepa Shrinivas (@darshanthoogudeepashrinivas)
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾 ನಿಮ್ಮ ದಾಸ ದರ್ಶನ್… ಎಂದು ಬರೆದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.