More

  ಅಂದು ಚೆಲುವಣ್ಣ ಮಾಡಿದ ಸಹಾಯಕ್ಕೆ ಇಂದು ಚಂದ್ರು ಅವರ ಪರ ಪ್ರಚಾರ ಮಾಡುತ್ತಿದ್ದೇನೆ: ನಟ ದರ್ಶನ್

  ಮಂಡ್ಯ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯ ಕಣ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಅಭ್ಯರ್ಥಿಗಳು ಬಿರುಸಿನ ಮತಬೇಟೆಯಲ್ಲಿ ನಿರತರಾಗಿದ್ದಾರೆ. ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಪರ ನಟ-ನಟಿಯರು ಪ್ರಚಾರ ಮಾಡುವುದು ಸರ್ವೇ ಸಾಮಾನ್ಯ. ಅದರಂತೆ ನಟ, ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ.

  ಚುನಾವಣೆ ಪ್ರಚಾರದ ವೇಳೆ ರಾಜಕೀಯ ನಾಯಕರು ಜನರ ಗಮನ ಸೆಳೆಯುವ ಭರದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೀಡಾಗುತ್ತಾರೆ. ಅದೇ ರೀತಿ ಇದೀಗ ನಟ ದರ್ಶನ್ ಪ್ರಚಾರದ ವೇಳೆ ನೀಡಿರುವ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ನಟನ ಈ ಮಾತು ಹಲವರಿಗೆ ಶಾಕ್ ನೀಡಿದೆ.

  ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ನಾಗಮಂಗಲದಲ್ಲಿ ರೋಡ್​ ಶೋ ನಡೆಸಿ ಮಾತನಾಡಿದ ನಟ ದರ್ಶನ್​, 2019ರಲ್ಲಿ ಚೆಲುವರಾಯಸ್ವಾಮಿ ಅವರು ನಮಗೆ ಸಹಾಯ ಮಾಡಿದ್ದರು. ಆ ಋಣವನ್ನು ನಾನು 7 ಜನ್ಮವಾದರೂ ತೀರಿಸಲು ಸಾಧ್ಯವಿಲ್ಲ. ಆ ಕಾರಣಕ್ಕಾಗಿ ನಾನು ಇಂದು ಕಾಂಗ್ರೆಸ್​ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

  Darshan Yash Sumalatha

  ಇದನ್ನೂ ಓದಿ: ನೇಹಾ ಕೊಲೆ ಪ್ರಕರಣ; ನಿರಂಜನ್ ಹಿರೇಮಠ್​ ಬಳಿ ಕ್ಷಮೆಯಾಚಿಸಿದ ಸಿಎಂ

  ಏಪ್ರಿಲ್​ 18ರಂದು ಮಂಡ್ಯದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು ಪರ ಮತಯಾಚಿಸಿದ ನಟ ದರ್ಶನ್​ ಅಂದು, ಮಳವಳ್ಳಿ ಶಾಸಕ ನರೇಂದ್ರಸ್ಟಾಮಿ ಅವರು ಐದು ವರ್ಷಗಳ ಹಿಂದೆ ಮಾಡಿದ ಸಹಾಯವನ್ನು ನಾನು ನೆನಪಿಸಿಕೊಳ್ಳುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಹಲವರಲ್ಲಿ ಆಶ್ಚರ್ಯವನ್ನುಂಟು ಮಾಡಿತ್ತು ಮತ್ತು ಹಲವು ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿತ್ತು. ಇದೀಗ ನಾಗಮಂಗಲದಲ್ಲಿ ನಟ ದರ್ಶನ್​ ಇದೇ ಹೇಳಿಕೆಯನ್ನು ನೀಡಿದ್ದು, ಹೊಸ ಚರ್ಚೆಗೆ ನಾಂದಿ ಹಾಡಿದೆ.

  2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವು ಇಡೀ ದೇಶದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಏಕೆಂದರೆ ಪಕ್ಷೇತರರಾಗಿ ಸುಮಲತಾ ಹಾಗೂ ಕಾಂಗ್ರೆಸ್​-ಜೆಡಿಎಸ್​ ಮಯತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಸಮಲತಾ ಪರ ನಟರಾದ ದರ್ಶನ್​ ಹಾಗೂ ಯಶ್​ ಪ್ರಚಾರ ಮಾಡಿದ್ದರು. ಬಿಜೆಪಿ ಜೊತೆಗೆ ಕಾಂಗ್ರೆಸ್​ನ ಕೆಲವು ಅತೃಪ್ತ ನಾಯಕರು ಸುಮಲತಾ ಅವರಿಗೆ ಬೆಂಬಲ ಸೂಚಿಸಿದ್ದರು. ಅದರಲ್ಲಿ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಕೂಡ ಒಳಗೊಂಡಿದ್ದರು ಎಂದು ಹೇಳಲಾಗಿದೆ. ಸುಮಲತಾ ಅವರ ಗೆಲುವಿಗೆ ಅನುಕಂಪದ ಅಲೆ, ಸ್ಟಾರ್​ ನಟರ ಪ್ರಚಾರ, ಬಿಜೆಪಿ ಬೆಂಬಲ ಮಾತ್ರವಲ್ಲದೇ ಈ ಇಬ್ಬರು ನಾಯಕರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts