More

    ಮೊದಲ ಬಾರಿಗೆ ಮಗಳ ಮುಖ ತೋರಿಸಿದ ಧ್ರುವ ಸರ್ಜಾ

    ಬೆಂಗಳೂರು: ನಟ ಧ್ರುವ ಸರ್ಜಾ ದಂಪತಿ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ್ದಾರೆ. ಈ ಫೋಟೋ ಸೋಶಿಯಲ್​​ ಮೀಡಿಯಾ ತುಂಬಾ ವೈರಲ್​​ ಆಗುತ್ತಿದೆ.

    7 ತಿಂಗಳ ಬಳಿಕ ಮೊದಲ ಬಾರಿಗೆ ಫೋಟೋ ಶೇರ್ ಮಾಡಿದ್ದಾರೆ. ಈ ಫೋಟೋ ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋ ಇದಾಗಿದೆ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

    “ಹಲೋ ಸ್ನೇಹಿತರೆ ಹಾಗೂ ಕುಟುಂಬದವರೆ, ನಿಮ್ಮೆಲ್ಲರಿಗೂ ನನ್ನ ಪ್ರೀತಿ. ನನಗೆ ಇನ್ನೂ ಹೆಸರಿಟ್ಟಿಲ್ಲ. ನನಗೆ ಈಗ 7 ತಿಂಗಳು. ನನ್ನ ಪಯಣವನ್ನು ಹಂಚಿಕೊಳ್ಳಲು ಖುಷಿ ಆಗುತ್ತದೆ. ನಾನು ಒಂದು ತಿಂಗಳ ಮಗುವಾಗಿದ್ದಾಗ ಕ್ಲಿಕ್ ಮಾಡಿದ ಕೆಲವು ಫೋಟೋಗಳನ್ನು ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ. ನಾನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫೋಟೋಗಳು ಮತ್ತು ಅಪ್‌ಡೇಟ್ ಹಂಚಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದ ಇರಲಿ. ಜೈ ಹನುಮಾನ್” ಎಂದು ಎಂದು ಒಂದು ಫೋಟೋವನ್ನು ಶೇರ್​​ ಮಾಡಿಕೊಂಡು ಬರೆದಿದ್ದಾರೆ.

    ಈ ಫೋಟೋ ನೋಡಿದ ಅಭಿಮಾನಿಗಳು ಕಾಮೆಂಟ್​ ಮಾಡುತ್ತಾ ಮೆಚ್ಚುಗೆ ಸೂಚಿಸಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣ 2019 ನವೆಂಬರ್ 24ರಂದು ದಾಂಪತ್ಯಕ್ಕೆ ಕಾಲಿಟ್ಟರು. ಮದುವೆಯಾಗಿ 3 ವರ್ಷಗಳ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದರು. ಕಳೆದ ವರ್ಷ ಸೆಪ್ಟಂಬರ್ 3ಕ್ಕೆ ಪ್ರೇರಣ ಮುದ್ದದ ಮಗಳಿಗೆ ಜನ್ಮ ನೀಡಿದರು. ಇದೀಗ ಮುಗುವಿಗೆ 7 ತಿಂಗಳು ತುಂಬಿದೆ.

    ವ್ಯಾನ್‌ಗೆ ಟ್ರಕ್ ಡಿಕ್ಕಿ: 6 ಮಂದಿ ಮೃತ್ಯು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts