More

    ಪೌಡರ್‌ನಲ್ಲಿ ಪೇಡಾ! ಸೆಟ್ಟೇರಿತು ನಟ ದಿಗಂತ್ ಹೊಸ ಚಿತ್ರ ‘ಪೌಡರ್’

    ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕನ್ನಡದ ಕೆಆರ್‌ಜಿ ಸ್ಟುಡಿಯೋಸ್ ಮತ್ತು ಹಿಂದಿಯ ಟಿವಿಎ್ ಮೋಷನ್ ಪಿಕ್ಚರ್ಸ್ ಸಂಸ್ಥೆಗಳು ಕೈಜೋಡಿಸಿದ ಬಗ್ಗೆ ಸುದ್ದಿಯಾಗಿತ್ತು. ಇದೀಗ ವರಮಹಾಲಕ್ಷ್ಮೀ ಹಬ್ಬದ ದಿನ ಈ ಎರಡೂ ಸಂಸ್ಥೆಗಳ ಮೊದಲ ಸಿನಿಮಾ ‘ಪೌಡರ್’ ಸೆಟ್ಟೇರಿದೆ.

    ಮೊದಲ ದೃಶ್ಯಕ್ಕೆ ನಟ ಕಿಚ್ಚ ಸುದೀಪ್ ಕ್ಲ್ಯಾಪ್ ಮಾಡಿದರು. ಈ ಸಂದರ್ಭದಲ್ಲಿ ನಟ ಡಾಲಿ ಧನಂಜಯ, ನಿರ್ದೇಶಕ ಸಂತೋಷ್ ಆನಂದರಾಮ್, ಧಿರೇನ್ ರಾಮಕುಮಾರ್, ನವೀನ್ ಶಂಕರ್, ನಾಗಭೂಷಣ್ ಸೇರಿ ಹಲವರು ಹಾಜರಿದ್ದರು. ‘ಪೌಡರ್’ ಒಂದು ಹಾಸ್ಯಮಯ ಚಿತ್ರವಾಗಿದ್ದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಅದರ ಹುಡುಕಾಟದಲ್ಲಿರುವ ದುಷ್ಟರ ಕಣ್ತಪ್ಪಿಸಿ, ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಹಳ್ಳಿ ಹುಡುಗರ ಸುತ್ತ ಕಥೆ ಸುತ್ತುತ್ತದೆ.

    ‘ಗುಳ್ಟೂ’ ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ಈ ಚಿತ್ರ ನಿರ್ದೇಶಿಸುತ್ತಿದ್ದು ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಪ್ರಮುಖ ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಸೀನ್ ರೋಲ್ಡನ್ ಸಂಗೀತ, ಶಾಂತಿ ಸಾಗರ್ ಛಾಯಾಗ್ರಹಣ ಇರಲಿದೆ. ಸೆಪ್ಟೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, 2024ರ ಏ.5ರಂದು ಸಿನಿಮಾ ಬಿಡುಗಡೆ ಮಾಡುವ ಆಲೋಚನೆ ಚಿತ್ರತಂಡದ್ದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts