ಸೌಜನ್ಯಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನ ಮಾಡುವುದಿಲ್ಲ: ನಟ ದುನಿಯಾ ವಿಜಯ್​

Untitled design - 2023-08-01T135112.761
Published on

ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಇತ್ತೀಚಿನ ಬೆಳವಣಿಗೆ ಕುರಿತು ಇದೀಗ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಟ್ವೀಟ್​ ಮಾಡುವ ಮುಖೇನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣದ ಬಗ್ಗೆ ಇದೀಗ ದುನಿಯಾ ವಿಜಯ್​ ಟ್ವೀಟ್​ ಮಾಡಿದ್ದು, "ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ" ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.

"ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ, ಯಾರು ಹೆಚ್ಚು ಸಮಯ ಮರೆಮಾಚಲಾಗದು - ಬುದ್ಧ" ಎಂದು ಬರೆದು ಪೋಸ್ಟ್​ ಮಾಡಿದ್ದು, ತಮ್ಮ ಅಸಮಾಧಾನವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net