ಆತ ಮೊದಲೇ… ನಿರ್ದೇಶಕ ಗುರುಪ್ರಸಾದ್ ಸಾವಿನ ಕುರಿತು ನಟ ಜಗ್ಗೇಶ್ ಹೇಳಿದ್ದಿಷ್ಟು… Guruprasad

Guruprasad

ಬೆಂಗಳೂರು: ಮಠ, ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್​ (Guruprasad) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಾಟಕ್ಕೆ ಹೆದರಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಗುರುಪ್ರಸಾದ್​ ನಿಧನದ ಬಗ್ಗೆ ನಟ ಜಗ್ಗೇಶ್​ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೇ ಅನೇಕ ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ. ನಾನು ಬುದ್ಧಿವಾದ ಹೇಳಿದ್ದೆ. ಆದ್ರೆ ಆತ ಯಾರ ಮಾತನ್ನು ಕೇಳುತ್ತಿರಲಿಲ್ಲ ಎಂದರು.

ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದಿರುವ ಹುಡುಗ. ನಾನು ಆತನನ್ನು ಹೆಚ್ಚಿಗೆ ಮಾತನಾಡಿಸುತ್ತಿರಲಿಲ್ಲ. ಆತನಿಗೆ ಅತಿಯಾದ ಕುಡಿತದ ಚಟವಿತ್ತು. ಕುಡಿದು ಕುಡಿದು ಹಾಳಾಗಿದ್ದ. ಗುರುಪ್ರಸಾದ್​ಗೆ ಒಳ್ಳೆಯ ಬರವಣಿಗೆ ಇತ್ತು. ಆದರೆ, ಆತ ಈ ನಿರ್ಧಾರ ತೆಗೆದುಕೊಂಡಿದ್ದು ನೋವಾಯಿತು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೊದಲೇ ಸಾವಿರ ಸಲ ಹೇಳಿದ್ದ ಎಂದು ಗುರುಪ್ರಸಾದ್​ ಸಾವಿಗೆ ಜಗ್ಗೇಶ್​ ಸಂತಾಪ ಸೂಚಿಸಿದರು.

ಇದನ್ನೂ ಓದಿ: ನೀನು ಮುಸ್ಲಿಂ ಅಥವಾ ಹಿಂದುನಾ? 1ನೇ ತರಗತಿ ವಿದ್ಯಾರ್ಥಿ ಕೊಟ್ಟ ಉತ್ತರ ವೈರಲ್…Hindu or Muslim​

ಕೆಲ ತಿಂಗಳ ಹಿಂದಷ್ಟೇ ಇವರ ನಿರ್ದೇಶನದ ರಂಗನಾಯಕ ಚಿತ್ರ ರಿಲೀಸ್​ ಆಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಈ ಚಿತ್ರವು ಬಾಕ್ಸ್​ಆಫೀಸ್​ನಲ್ಲಿ ಹೀನಾಯವಾಗಿ ಸೋಲುಂಡಿತ್ತು. ಸಾಲಬಾಧೆ ತಾಳಲಾರದೆ ಗುರುಪ್ರಸಾದ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ.

1972ನೇ ನವೆಂಬರ್ 2 ಗುರುಪ್ರಸಾದ್ ಜನಿಸಿದ್ದರು. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಗುರುಪ್ರಸಾದ್ ಜನಿಸಿದರು.2006 ರಲ್ಲಿ ಮಠ ಸಿನೆಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಆದರು. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್, ರಂಗ ನಾಯಕ ಹಾಗೂ ಎರಡನೇ ಸಲ ಸೇರಿದಂತೆ ಹಲವು ಸಿನಿಮಾ ನಿರ್ದೇಶನ ಮಾಡಿದ್ದರು. ಎದ್ದೇಳು ಮಂಜುನಾಥ ಚಲನಚಿತ್ರದ ಅತ್ಯುತ್ತಮ ಚಿತ್ರಕಥೆಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಬಂದಿತ್ತು.

ಮಠ ಖ್ಯಾತಿಯ ನಿರ್ದೇಶಕ Guruprasad​ ಆತ್ಮಹತ್ಯೆಗೆ ಶರಣು

10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ರೀತಿ ಕೊಲ್ಲುವುದಾಗಿ ಸಿಎಂ ಯೋಗಿಗೆ ಬೆದರಿಕೆ! Yogi Adityanath

 

 

Share This Article

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…

Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!

Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು  ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…