More

    ನಿನ್ನ ಧ್ವನಿ ಕೇಳಬಹುದೇನೋ… ಆದರೆ ನೀನಿರೊಲ್ಲ; ಗೆಳೆಯನನ್ನು ನೆನೆದು ಭಾವುಕರಾದ ನಟ ಕಿಶೋರ್

    ಬೆಂಗಳೂರು: ಹೃದಯಘಾತದಿಂದ ನಿಧನರಾದ ತಮಿಳಿನ ಖ್ಯಾತ ನಟ ಡೇನಿಯಲ್​ ಬಾಲಾಜಿ ಅವರ ಸಾವು ಹಲವರನ್ನು ಆಘಾತಕ್ಕೆ ದೂಡಿದ್ದು, ಹಲವು ದಿಗ್ಗಜರು ಬಾಲಾಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇತ್ತ ಆತ್ಮೀಯ ಗೆಳೆಯನನ್ನು ನೆನೆದು ಬಹುಭಾಷಾ ನಟ ಕಿಶೋರ್​ ಅವರು ಭಾವುಕವಾಗಿ ನುಡಿಗಳನ್ನು ಆಡಿದದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಗುಡ್ ಬೈ ಬ್ರದರ್.. ವಿಲ್ ಮಿಸ್ ಯು… ಪೊಲ್ಲಾದವನ್ ನಮಗೆಲ್ಲರಿಗೆ ಕೇವಲ ಸಿನಿಮಾ ಆಗಿರಲಿಲ್ಲ ಮನೆಯಾಗಿತ್ತು, ಕುಟುಂಬವಾಗಿತ್ತು. ನಿಯಮಿತವಾಗಿ ಯಾವುದೇ ಮಾತುಕತೆಯಿಲ್ಲದಿದ್ದರೂ… ನಮ್ಮಲ್ಲಿ ಒಬ್ಬರ ಆಲೋಚನೆಗಳು, ಚಲನಚಿತ್ರಗಳು ಮತ್ತು ಯಶಸ್ಸಿನ ಬಗ್ಗೆ ಯಾವಾಗಲಾದರೂ ಬರುವ ಸುದ್ದಿ ಅಥವಾ ವೀಡಿಯೊವನ್ನು ನೋಡಿದಾಗ ನಮ್ಮ ಮುಖದಲ್ಲಿ ಮೂಡುವ ಆ ಮುಗುಳ್ನಗೆ ..ನಾವು ಪರಸ್ಪರರ ಬಗ್ಗೆ ಮಾತನಾಡುವಾಗ .. ಹೊಮ್ಮುವ ಆ ಹೆಮ್ಮೆಯ ಭಾವ ..ನಮ್ಮೊಂದಿಗೆ ಅಥವಾ ನಾವಿಲ್ಲದೆ ನಮ್ಮಲ್ಲಿ ಯಾರು ಯಾವ ಕೆಲಸ ಮಾಡಿದರೂ ನಾವು ಪಡುವ ಆ ಸಂತೋಷ … ಏನೆಂದು ಹೇಳಲಿ. 

    ನಾನು ಎಲ್ಲಿ ಹೋದರೂ ಜನ ಯಾವಾಗ ವಡಚೆನ್ನೈ -2 ಎಂದು ಕೇಳುತ್ತಲೇ ಇರುತ್ತಾರೆ .. ನಾನು ತಮಾಷೆಯಾಗಿ ಹೇಳುತ್ತಿರುತ್ತೇನೆ ವೆಟ್ರಿ ಒಪ್ಪಿಕೊಂಡಿರುವ ಸಿನಿಮಾಗಳ ಸಾಲು ನೋಡಿದರೆ ನಾವು 70 ವರ್ಷ ವಯಸ್ಸಿನವರಾದಾಗ ಮಾತ್ರ ಮಾಡಲು ಸಾಧ್ಯವಾಗಬಹುದು ಎಂದು ಆದರೆ…ಈಗಲೂ ಅನಿಸುತ್ತಿದೆ ನಾನು ಕರೆ ಮಾಡಿದರೆ ಆ ಕಡೆಯಿಂದ ಆ ನಿನ್ನದೇ ಸ್ಟೈಲಿನ ಕೊರಳ ದನಿ ಕೇಳಬಹುದೇನೋ  ಅಣ್ಣಾ ಎಪ್ಪಡಿ ಇರುಕ್ಕೀಂಗ ಎಂದು ನೀನು ಹೇಳುವುದನ್ನು ಕೇಳಬೇಕು ಅನಿಸುತ್ತಿದೆ. ನಿನ್ನನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ ಸಹೋದರ ಎಂದು ನಟ ಕಿಶೋರ್​ ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts