More

  ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದ ನಟ ಮಂಡ್ಯ ರಮೇಶ್‌ಗೆ ತೀವ್ರಗಾಯ

  ಬೆಂಗಳೂರು: ಆಸೆ ಧಾರಾವಾಹಿ ಶೂಟಿಂಗ್ ವೇಳೆ  ನಟ ಮಂಡ್ಯ ರಮೇಶ್​ ಅವರಿಗೆ ತೀವ್ರಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.

  ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರಂತೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ.

  ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.

  ಸದ್ಯ ಚಿಕಿತ್ಸೆ ಪಡೆದಿರುವ ಮಂಡ್ಯ ರಮೇಶ್ ಅವರಿಗೆ ಒಂದು ತಿಂಗಳ ಕಾಲ ರೆಸ್ಟ್ ತಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ.

  ರಕ್ತದಾನ, ನೇತ್ರದಾನದಂತೆ ಮಲದಾನ; ಮಾನವನ ತ್ಯಾಜ್ಯವನ್ನು ಮಾರಿ ಕೋಟಿ..ಕೋಟಿ ಸಂಪಾದಿಸಿ…

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts