More

    ನಟ ನಂದಮೂರಿ ತಾರಕ ರತ್ನ ನಿಧನ; ಫಲಿಸಲಿಲ್ಲ 22 ದಿನಗಳ ಜೀವನ್ಮರಣ ಹೋರಾಟ

    ಆನೇಕಲ್: ಕಳೆದ 22 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ತೆಲುಗು ಚಿತ್ರ ನಟ ನಂದಮೂರಿ ತಾರಕ ರತ್ನ ಅವರ ಆರೋಗ್ಯ ಪರಿಸ್ಥಿತಿ ಇಂದು ಬಿಗಡಾಯಿಸಿದ್ದು, ಅವರು ಇಂದು ರಾತ್ರಿ ಕೊನೆಯುಸಿರೆಳೆದರು. ಬೆಂಗಳೂರು ಹೊರವಲಯದ ಆನೇಕಲ್​ ಬಳಿಯ ಬೊಮ್ಮಸಂದ್ರದಲ್ಲಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ತಾರಕ ರತ್ನಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಲ್ಲೇ ಅವರು ನಿಧನರಾದರು.

    ಕಳೆದ 22 ದಿನಗಳಿಂದ ತಾರಕ ರತ್ನಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಅಕ್ಷರಶಃ ಜೀವನ್ಮರಣ ಹೋರಾಟ ನಡೆಸಿದ್ದರು. ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳ ನಡುವೆಯೂ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದರು. ಇಂದು ಆರೋಗ್ಯ ಪರಿಸ್ಥಿತಿ ತೀರಾ ಬಿಗಡಾಯಿಸಿದ್ದರಿಂದ ಸಂಜೆಯೇ ಆಸ್ಪತ್ರೆ ಬಳಿ ಹೆಚ್ಚಿನ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿತ್ತು. ಇದೀಗ ಅವರು ಸಾವಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತಷ್ಟು ಬಿಗಿ ಬಂದೋಬಸ್ತ್ ವಹಿಸಲಾಗಿದೆ. ಅವರ ಪಾರ್ಥಿವ ಶರೀರವನ್ನು ಕೆಲವೇ ಸಮಯದಲ್ಲಿ ಹೈದರಾಬಾದ್​ಗೆ ಸ್ಥಳಾಂತರಿಸಲಾಗುವುದು ಎಂಬ ಮಾಹಿತಿ ಲಭಿಸಿದೆ.

    ತೆಲುಗುದೇಶಂ ಪಕ್ಷ ಜ. 27ರಂದು ಕುಪ್ಪಂ ಬಳಿ ಆಯೋಜಿಸಿದ್ದ ಪಾದಯಾತ್ರೆ ಸಂದರ್ಭ ತಾರಕ ರತ್ನ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರಿಗೆ ನಾರಾಯಣ ಹೆಲ್ತ್​ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 22 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ತಾರಕ ರತ್ನ ಸಾವಿಗೆ ತೆಲುಗುದೇಶಂ ಪಕ್ಷದ ಅಧ್ಯಕ್ಷ ಎನ್​.ಚಂದ್ರಬಾಬುನಾಯ್ಡು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!

    ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts