

ನವದೆಹಲಿ: ತೆಲುಗು ಚಿತ್ರರಂಗದ ಖ್ಯಾತ ನಟ ನವೀನ್ ಪೋಲಿಶೆಟ್ಟಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಮೆರಿಕಾದಲ್ಲಿ ಘಟನೆ ನಡೆದಿದ್ದು, ಬೈಕ್ ಚಲಾಯಿಸುವಾಗ ಅಪಘಾತವಾಗಿದೆ ಎಂದು ವರದಿಯಾಗಿದೆ.
ಅಮೆರಿಕಾದ ಡೆಲ್ಲಾಸ್ನಲ್ಲಿ ಘಟನೆ ನಡೆದಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನವೀನ್ಗೆ ಕೈ ಮೂಳೆ ಮಾತ್ರವೇ ಅಲ್ಲದೆ ಇನ್ನೂ ಹಲವು ಕಡೆ ಗಂಭೀರ ಪೆಟ್ಟುಗಳಾಗಿವೆ ಆದರೆ ಜೀವಕ್ಕೆ ಯಾವುದೇ ಅಪಾಯವಿಲ್ಲ ಎನ್ನಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನಟನ ಕಚೇರಿ ಸಿಬ್ಬಂದಿ, ಅಮೆರಿಕಾದ ಡಲ್ಲಾಸ್ನಲ್ಲಿ ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿದ ಕಾರಣ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಅವರ ಕೈ ಮುರಿದಿದ್ದು, ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ ಎಂದು ನಟನ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
ಪ್ರಸ್ತುತ ಅನಗನಗಾ ಒಕ ರಾಜು ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇರುವ ನವೀನ್ ತಃ ಚಿತ್ರಕತೆ ಬರಹಗಾರ ಸಹ ಆಗಿ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಅನುಷ್ಕಾ ಶೆಟ್ಟಿಗೆ ನಾಯಕನಾಗಿ ನಟಿಸಿದ್ದ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಸಿನಿಮಾ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು.