More

  ಬಿಜೆಪಿ ತೊರೆದು ಕಾಂಗ್ರೆಸ್​ ಸೇರಲು ಮುಂದಾದ ನಟಿ ವಿಜಯಶಾಂತಿ

  ತೆಲಂಗಾಣ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟಿ ವಿಜಯಶಾಂತಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.

  ವಿಜಯಶಾಂತಿ ಬಿಜೆಪಿ ತೊರೆದ ಬೆನ್ನಲ್ಲೇ ಆ್ಯಕ್ಟಿವ್​ ಆಗಿರುವ ಕಾಂಗ್ರೆಸ್​ ನಾಯಕರು ಈಗಾಗಲೇ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದು, ತಮ್ಮತ್ತ ಸೆಳೆಯುವಲ್ಲಿ ಕಾರ್ಯನಿರತರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಅವರು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.

  ಇತ್ತೀಚಿನ ದಿನಗಳಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯವೈಖರಿ ಬಗ್ಗೆ ತೀವ್ರವಾಗಿ ಅಸಮಾಧಾನ ಹೊಂದಿದ್ದ ವಿಜಯಶಾಂತಿ ಪಕ್ಷದ ಸಭೆಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಇದಾದ ಬಳಿಕ ಪಕ್ಷದ ಚಟುವಟಿಕೆಗಳಿಂದ ದೂರು ಉಳಿದಿದ್ದ ಅವರನ್ನು ಸ್ಟಾರ್​ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿತ್ತು. ಇದಲ್ಲದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಟಿಕೆಟ್​ ನಿರಾಕರಿಸಿದ್ದು, ಪಕ್ಷ ಬಿಡಲು ಮುಖ್ಯ ಕಾರಣ ಎಂದು ಹೇಳಲಾಗಿದೆ.

  ಇದನ್ನೂ ಓದಿ: ಹಳಿ ಮೇಲೆ ಮರದ ದಿಮ್ಮಿ, ಕಬ್ಬಿಣ ಇಟ್ಟು ರೈಲು ಅಪಘಾತಕ್ಕೆ ಯತ್ನ; ಮೂವರು ಅರೆಸ್ಟ್

  ವಿಜಯಶಾಂತಿ ಅವರ ಜತೆಜತೆಗೆ ಮಾಜಿ ಶಾಸಕ ಕೋಮಟಿರೆಡ್ಡಿ ರಾಜಗೋಪಾಲ್ ರೆಡ್ಡಿ ಮತ್ತು ಮಾಜಿ ಸಂಸದ ಜಿ.ವಿವೇಕ್ ವೆಂಕಟಸ್ವಾಮಿ ಅವರು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವುದಾಗಿ ಘೋಷಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಪ್ರಮುಖ ನಾಯಕರು ಪಕ್ಷ ತೊರೆದು ಕಾಂಗ್ರೆಸ್​ ಸೇರುತ್ತಿರುವುದು ಬಿಜೆಪಿ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಚುನಾವಣೆಯಲ್ಲಿ ಇದು ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.

  See also  ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇನೆ, ಕಣ್ಮುಚ್ಚಿ ಕೈಗೆ ವೋಟ್ ಮಾಡಿ: ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ

  ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂದಬರು ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts