

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು. ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು.
ಇನ್ನೇನು ಆ. 23ರಂದು ಚಂದ್ರಯಾನ-3 ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲಿದೆ ಎಂದು ಇಸ್ರೋ ಇಂದು ಮಾಹಿತಿ ನೀಡಿದೆ. ಆದರೆ ಇಂದು ರಾತ್ರಿ ನಟ ಪ್ರಕಾಶ್ ರಾಜ್ ಹಂಚಿಕೊಂಡಿರುವ ಫೋಟೋವೊಂದು ಹಲವರನ್ನು ಬೇಸರಗೊಳ್ಳುವಂತೆ ಮಾಡಿದ್ದು, ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿದೆ.
ಚಹಾ ಮಾಡುವ ವ್ಯಕ್ತಿಯೊಬ್ಬನ ವಿರೂಪಗೊಳಿಸಿದ ಫೋಟೋ ಹಂಚಿಕೊಂಡಿರುವ ಪ್ರಕಾಶ್ ರಾಜ್, ವಿಕ್ರಮ್ ಲ್ಯಾಂಡರ್ ಮೂಲಕ ಚಂದ್ರನಿಂದ ಬರುತ್ತಿರುವ ಮೊದಲ ಚಿತ್ರ ಎಂಬ ಕ್ಯಾಪ್ಷನ್ ಹಾಕಿದ್ದಾರೆ. ಇದು ಇಸ್ರೋಗೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅಪಮಾನ ಎಂದು ಹಲವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದಾರೆ.