

ಬೆಂಗಳೂರು: ನಟ-ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡನೇ ದಿನವಾದ ಬುಧವಾರವೂ ಚಿಕಿತ್ಸೆ ಮುಂದುವರಿದಿದ್ದು, ರಾಘಣ್ಣನ ಆರೋಗ್ಯದಲ್ಲಿ ಕಂಡು ಬಂದ ಚೇತರಿಕೆ ಕಂಡು ಬಂದಿದ್ದು, ಐಸಿಡಿ ಚಿಕಿತ್ಸೆ ಮಾಡದಿದ್ರೆ ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ರಾಜ್ಕುಮಾರ್ ಕುಟುಂಬದ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ಮಧು ಫಿಲ್ಮ್ ಹೌಸ್ನಲ್ಲೇ ರಾಘಣ್ಣ ಅಸ್ವಸ್ಥರಾಗಿದ್ದರು.
ರಾಘಣ್ಣನ ಸಹೋದರರಾದ ನಟ ಶಿವಣ್ಣ, ಪುನೀತ್ ರಾಜ್ಕುಮಾರ್ ಸೇರಿದಂತೆ ಅಣ್ಣಾವ್ರ ಕುಟುಂಬಸ್ಥರು ಆಸ್ಪತ್ರೆ ಭೇಟಿ ನೀಡಿದ್ದಾರೆ. ಮುನ್ನೆಚ್ಚರಿಕೆಯಾಗಿ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.