

ಬೆಂಗಳೂರು; 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದೆ. ಇನ್ನೂ ಈ ಸಮಾರಂಭದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಘೋಷಿಸಲಾಗಿದೆ. 777 ಚಾರ್ಲಿ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ಲಭಿಸಿದೆ. ಕಿರಣ್ ರಾಜ್ ನಿರ್ದೇಶನದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ಪುಷ್ಕರ್ ಫಿಲಂಸ್ ಬ್ಯಾನರ್ನಲ್ಲಿ 777 ಚಾರ್ಲಿ ಚಿತ್ರವನ್ನು ರಕ್ಷಿತ್ ಶೆಟ್ಟಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದರು. ಮ್ಯೂಟ್ ಚಿತ್ರಕ್ಕಾಗಿ ಅರ್ಚನಾ ಜೋಯ್ಸ್ಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಸಿಕ್ಕಿದೆ.
ಪುನೀತ್ ರಾಜ್ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾ ಅತ್ಯುತ್ತಮ ಮನರಂಜನಾ ಚಿತ್ರ’ ಎಂಬ ಕೀರ್ತಿಗೆ ಪಾತ್ರವಾಗಿದೆ. ಹೃದಯಶಿವ ನಿರ್ದೇಶನದ ಬಿಸಿಲು ಕುದುರೆ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ರತ್ನನ್ ಪ್ರಪಂಚ ಸಿನಿಮಾದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಎಂಬ ಹೆಗ್ಗಳಿಕೆಗೆ ಉಮಾಶ್ರೀ ಭಾಜನರಾಗಿದ್ದಾರೆ. ಹಾಗೂ ಪ್ರಮೋದ್ರಿಗೆ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಸಿಕ್ಕಿದೆ. ರಘು ಕೆ.ಎಂ ನಿರ್ದೇಶನದ ದೊಡ್ಡಹಟ್ಟಿ ಬೋರೇಗೌಡ ಮೊದಲನೇ ಅತ್ಯುತ್ತಮ ಸಿನಿಮಾವಾಗಿದು, ಇನ್ನೂ ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 ಎರಡನೇ ಅತ್ಯುತ್ತಮ ಚಿತ್ರವಾಗಿದೆ.
(ಏಜೆನ್ಸೀಸ್)