ನಟ ಸೈಫ್ ಅಲಿ ಖಾನ್ ಸ್ಥಿತಿ ಗಂಭೀರ! ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ...Saif Ali Khan Undergoes Surgery

saif ali khan
Published on

ಮುಂಬೈ: ( Saif Ali Khan Undergoes Surgery)   ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್​​ ನಟ ಸೈಫ್ ಅಲಿಖಾನ್​ ಅವರ ಮನೆಗೆ ಕಳ್ಳನೊಬ್ಬ ನುಗ್ಗಿದ್ದಾನೆ. ಈ ವೇಳೆ ಸೈಫ್​ ಮೇಲೆ ದಾಳಿ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಿ ತುರ್ತು  ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

6 ಬಾರಿ ಚಾಕು ಇರಿತ, 2 ಎರಡು ಗಂಭೀರ ಗಾಯ

ಗಾಯಗೊಂಡ ಸೈಫ್ ಅವರನ್ನು ಚಿಕಿತ್ಸೆಗಾಗಿ ಸಮೀಪದ ಮುಂಬೈನ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಲೀಲಾವತಿ ಆಸ್ಪತ್ರೆಯ ಸಿಒಒ ಡಾ.ನೀರಜ್ ಉತ್ತಮನಿ ಮಾತನಾಡಿ, ಸೈಫ್‌ಗೆ ಆರು ಗಾಯಗಳಾಗಿದ್ದು, ಅವುಗಳಲ್ಲಿ ಎರಡು ಆಳವಾದವುಗಳಾಗಿವೆ. ಗಾಯಗಳಲ್ಲಿ ಒಂದು ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ. ನಾವು ಅವರಿಗೆ ಆಪರೇಷನ್ ಮಾಡುತ್ತಿದ್ದೇವೆ. ನರಶಸ್ತ್ರಚಿಕಿತ್ಸಕ ನಿತಿನ್ ಡಾಂಗೆ, ಕಾಸ್ಮೆಟಿಕ್ ಸರ್ಜನ್ ಲೀನಾ ಜೈನ್ ಮತ್ತು ಅರಿವಳಿಕೆ ತಜ್ಞ ನಿಶಾ ಗಾಂಧಿ ಅವರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಶಸ್ತ್ರಚಿಕಿತ್ಸೆಯ ನಂತರವೇ ಹಾನಿಯ ಪ್ರಮಾಣವನ್ನು ನಾವು ತಿಳಿಸುತ್ತೇವೆ ಎಂದಿದ್ದಾರೆ.

ಸೈಫ್ ಅಲಿ ಖಾನ್ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ

ಕುತ್ತಿಗೆಯ ಮೇಲೆ ಒಂದು ಗಾಯವಿದೆ. ಮ. ಮುಂಜಾನೆ 5:30ಕ್ಕೆ ಶಸ್ತ್ರಚಿಕಿತ್ಸೆ ಆರಂಭವಾಗಿದ್ದು,  ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ನಡೆದಿದ್ದೇನು?: 

ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ಕಳ್ಳನೊಬ್ಬ ನುಗ್ಗಿದ್ದಾನೆ. ಕಳ್ಳ ಮನೆಗೆ ಪ್ರವೇಶಿಸಿದನ್ನು ಅರಿತುಕೊಂಡ ಮನೆಯ ಸಿಬ್ಬಂದಿ  ಎಚ್ಚರಗೊಂಡರು. ಮನೆಯಲ್ಲಿ ಗಲಾಟೆಯಿಂದ ನಿದ್ದೆಯಿಂದ ಎದ್ದ ಸೈಫ್ ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಇದೇ ವೇಳೆ ಕಳ್ಳ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ.

ಈ ಘಟನೆ ಬಳಿಕ ಕಳ್ಳ ತಲೆಮರೆಸಿಕೊಂಡಿದ್ದಾನೆ. ಆತನನ್ನು ಹಿಡಿಯಲು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಶ್ರಮಿಸುತ್ತಿದ್ದಾರೆ. ಸೈಫ್ ಅಲಿ ಖಾನ್ ಪತ್ನಿ, ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಶೀಘ್ರದಲ್ಲೇ ಪ್ರಕರಣದ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ. ಮನೆಯ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಸೈಫ್​ ಅಲಿಖಾನ್​ ಅವರ ಆಪ್ತರು ಹೇಳುವುದು ಏನು?:

ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಈ ವೇಳೆ ಕಳ್ಳ ತಪ್ಪಿಸಿಕೊಳ್ಳಲು ಹೋಗಿ ಅವರ ಮೇಳೆ ಚಾಕುವಿನಿಂದ ದಾಳಿ  ಮಾಡಿ ತಪ್ಪಿಸಿಕೊಂಡಿದ್ದಾನೆ. ಗಾಯಗೊಂಡ ಸೈಫ್​​ ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.  ಅಭಿಮಾನಿಗಳು ತಾಳ್ಮೆಯಿಂದಿರಿ ಎಂದು ನಾವು ವಿನಂತಿಸುತ್ತೇವೆ. ಇದು ಪೊಲೀಸ್ ಕೇಸ್​​ ಅವರು ನೋಡಿಕೊಳ್ಳುತ್ತಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net