More

    VIDEO | ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ; ವೇದಿಕೆ ಮೇಲೆ ಯುವಕರಂತೆ ಕುಣಿದು ಕುಪ್ಪಳಿಸಿದ ಶಿವಣ್ಣ!

    ಮೈಸೂರು: ಮೈಸೂರಿನ ಇನ್ಫೋಸಿಸ್​ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಕರುನಾಡ ಚಕ್ರವರ್ತಿ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್​ಕುಮಾರ್​ ವೇದಿಕೆ ಮೇಲೆ ಕುಣಿದು ಕುಪ್ಪಳಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ಇದನ್ನೂ ಓದಿ: ಅವರ ಆಟಗಳೆಲ್ಲ ನಮಗೆ ತುಂಬ ಚೆನ್ನಾಗಿ ಗೊತ್ತಿದೆ: ಬಸನಗೌಡ ಪಾಟೀಲ್ ಯತ್ನಾಳ್

    ಇತ್ತೀಚೆಗಷ್ಟೇ ಶಿವರಾಜ್​ಕುಮಾರ್​ ಅಭಿನಯದ ‘ಘೋಸ್ಟ್’ ಸಿನಿಮಾ ಅಕ್ಟೋಬರ್​ 19 ರಂದು ರಾಜ್ಯಾದ್ಯಂತ ಬಿಡುಗಡೆಗೊಂಡು ಸಿನಿಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆದುಕೊಂಡಿತು. ತದನಂತರ ಚಿತ್ರವನ್ನು ಥಿಯೇಟರ್​ನಲ್ಲಿ ನೋಡಲಾಗದ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡ ಚಿತ್ರತಂಡ ಶೀಘ್ರವೇ ಜೀ5 ಒಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಚಿತ್ರವನ್ನು ಲೈವ್​ ಸ್ಟ್ರೀಮಿಂಗ್​ಗೆ ಲಭ್ಯವಾಗುವಂತೆ ಮಾಡಿದೆ. ಈ ಮೂಲಕ ಸಿನಿಪ್ರಿಯರು ಇದೀಗ ಘೋಸ್ಟ್​ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

    ಚಿತ್ರದ ಕೆಲಸಗಳನೆಲ್ಲಾ ಮುಗಿಸಿಕೊಂಡ ಬಳಿಕ ಮೈಸೂರಿಗೆ ಭೇಟಿ ನೀಡಿದ್ದ ಶಿವಣ್ಣ, ಇನ್​ಫೋಸಿಸ್​ ಸಂಸ್ಥೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ವೇದಿಕೆ ಮೇಲೆ ಉಪಸ್ಥಿತರಿದ್ದ ಶಿವರಾಜ್​ಕುಮಾರ್​, ತಮ್ಮದೇ ಚಿತ್ರದ ಸೂಪರ್​ಹಿಟ್​ ಹಾಡುಗಳಿಗೆ ಮನಬಿಚ್ಚಿ ಡ್ಯಾನ್ಸ್​ ಮಾಡಿದ್ದಾರೆ. ಈ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

    ಇದನ್ನೂ ಓದಿ: ಯಾವುದೇ ಸಮುದಾಯಕ್ಕೆ ಅನ್ಯಾಯವಾಗದು

    ‘ವಿಲನ್’​, ‘ಟಗರು’ ಚಿತ್ರಗಳ ಹಾಡಿಗೆ ಕುಣಿದು ಕುಪ್ಪಳಿಸಿದ ಶಿವಣ್ಣ, ತಮಗೆ 60 ವರ್ಷ ವಯಸ್ಸಾಗಿದೆ ಎಂಬುದನ್ನು ಮರೆತು ಚಿರ ಯುವಕನಂತೆ ಡ್ಯಾನ್ಸ್​ ಮಾಡಿರುವುದು ಅವರ ಅಭಿಮಾನಿಗಳಲ್ಲಿ ಭಾರೀ ಸಂತಸ ಮೂಡಿಸಿದೆ.

    BBKS10: ವರ್ತೂರ್ ಸಂತೋಷ್ ಎಸ್ಕೇಪ್​!; ಹುಡುಕಾಡಿದ ಸ್ಪರ್ಧಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts