ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುದೀಪ್ ದಂಪತಿ

Sudeep
Published on

ಮಂಗಳೂರು: ನಟ ಕಿಚ್ಚ ಸುದೀಪ್ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲೊಂದಾದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

ನಟ ಸುದೀಪ್ ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪತ್ನಿ ಪ್ರಿಯಾ ಜೊತೆ ಕಟೀಲು ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಸುದೀಪ್​ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

ಸುದೀಪ್ ಇತ್ತೀಚೆಗಷ್ಟೆ ಮಂತ್ರಾಲಯಕ್ಕೆ ತೆರಳಿದ್ದರು. ಇದರ ಬೆನ್ನಲ್ಲೇ ಸುದೀಪ್ ಅಭಿನಯದ ಹೊಸ ಸಿನಿಮಾ ಸೆಟ್ ಏರಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ವಿಕ್ರಾಂತ್ ರೋಣ ಬಿಡುಗಡೆಯಾದ ನಂತರ ಸುದೀಪ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಇದೀಗ ಸುದೀಪ್ ಅಭಿನಯದ ಹೊಸ ಸಿನಿಮಾಗೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹೌಸ್ ಮುಂದಾಗಿದೆ ಎಂಬ ಮಾತುಗಳು ಗಾಂಧಿ ನಗರದಲ್ಲಿ ಓಡಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net