ತಮಿಳಿನ ಖ್ಯಾತ ನಟ ವಿಜಯ್​ ಆಂಟೋನಿ ಪುತ್ರಿ ಆತ್ಮಹತ್ಯೆ

Vijay Meera
Published on

ಚೆನ್ನೈ: ತಮಿಳಿನ ಖ್ಯಾತ ನಟ, ಸಂಗೀತ ನಿರ್ದೇಶಕ ವಿಜಯ್​ ಆಂಟೋನಿ ಅವರ ಪುತ್ರಿ ಮೀರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೆನ್ನೈನ ಅಳ್ವಾರ್​ಪೇಟೆಯ ಟಿಡಿಕೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀರಾ ಚೆನ್ನೈನ ಚರ್ಚ್ ಪಾರ್ಕ್ ಶಾಲೆಯಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮೀರಾ ತುಂಬಾ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ.

Vijay Antony Meera

ನಿನ್ನೆ ರಾತ್ರಿ ಅವರು ಎಂದಿನಂತೆ ತನ್ನ ರೂಮ್​ನಲ್ಲಿ ಮಲಗಲು ಹೋಗಿದ್ದರು. ಬೆಳಗಿನ ಜಾವ 3 ಘಂಟೆ ಸುಮಾರಿಗೆ ಮಗಳ ರೂಮ್​ಗೆ ತೆರಳಿದ ವಿಜಯ್​ ಆಂಟೋನಿ ತಮ್ಮ ಮಗಳು ಫ್ಯಾನಿಗೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ್ದಾರೆ. ಕೂಡಲೇ ಆಕೆಯನ್ನು ಮೈಲಾಪುರದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ತೇನಂಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೀರಾ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net