ತಮಿಳು ನಟ ವಿಕ್ರಮ್​ಗೆ ಹೃದಯಾಘಾತ!

Vikram
Published on

ಚೆನ್ನೈ: ತಮಿಳು ಖ್ಯಾತ ನಟ ವಿಕ್ರಮ್​ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಪ್ರಾಣಕ್ಕೇನು ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಸಂಜೆ ಅವರ ಅಭಿನಯದ ಪೊನ್ನಿಯನ್​ ಸೆಲ್ವಂ ಸಿನಿಮಾದ ಟೀಸರ್ ಬಿಡುಗಡೆ ಆಗಬೇಕಿತ್ತು, ಆದರೆ ಈ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net