ರೇಣುಕಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ವಿನೋದ್​ ರಾಜ್​; ಬಳಿಕ ಹೇಳಿದ್ದಿಷ್ಟು

Renuka Raj
Published on

ಚಿತ್ರದುರ್ಗ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್​ ಅವರನ್ನು ಭೇಟಿಯಾಗಲು ಪ್ರತಿನಿತ್ಯ ಪರಪ್ಪನ ಅಗ್ರಹಾರದ ಬಳಿ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಜುಲೈ 23ರಂದು ಭೇಟಿ ನಟ ದರ್ಶನ್​ರನ್ನು ವಿನೋದ್​ ರಾಜ್​ ಭೇಟಿ ಮಾಡಿದ್ದರು. ದಾಸನನ್ನು ಭೇಟಿ ಮಾಡಿದ ಬಳಿಕ ಇದೀಗ ದರ್ಶನ್​ ಗ್ಯಾಂಗ್​ನಿಂದ ಹತ್ಯೆಗೀಡಾಗಿದ್ದ ರೇಣುಕಸ್ವಾಮಿ ಕುಟುಂಬವನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದು, ವೈಯಕ್ತಿಕವಾಗಿ 1 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ.

ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಬಳಿಕ ಮಾತನಾಡಿದ ವಿನೋದ್​ ರಾಜ್, ಮನೆಗೆ ಆಧಾರ ಸ್ತಂಭವಾದ ಮಗನನ್ನು ಕಳೆದುಕೊಂಡಿದ್ದಾರೆ. ಕುಟುಂಬ ಪರಿತಪಿಸುತ್ತಿರುವ ಸ್ಥಿತಿ ಕಂಡು ಕರಳುಕಿತ್ತು ಬರ್ತಿದೆ. ನಾವು ಮನುಷ್ಯರಾಗಿದ್ದೀವಾ ಅಂತ ಮುಟ್ಟಿ ನೋಡಿಕೊಳ್ಳುವ ಕಾಲ. ಪ್ರತಿಯೊಂದು ಜೀವಿಗೂ ಜೀವವಿದೆ, ಮಕ್ಕಳು ಬಾಳಬೇಕು, ಬೆಳೆದು ಬೆಳಗಬೇಕು ಅಂತ ತಂದೆ ತಾಯಿ ಬೆಳೆಸುವರು, ಕೆಟ್ಟದ್ದು ಜಾಸ್ತಿಯಾದಾಗ ಇಂತಹ ಕೃತ್ಯ ನಡೆಯುವವು, ಇಂತಹ ಘಟನೆ ಹೆಚ್ಚಾಗದಂತೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ.

Vinod Raj

ಕಲಾವಿದರನ್ನು ನೋಡಿ ಜನ ಅನುಕರಣೆ ಮಾಡುತ್ತಾರೆ. ಹೀಗೆ ಆಗಿರುವುದು ಆಘಾತಕಾರಿ ವಿಷಯ. ಹೆಸರು, ಕೀರ್ತಿಯಲ್ಲಿರುವ ನಾವು ಎಚ್ಚರವಾಗಿರಬೇಕು, ನಮ್ಮ ಉನ್ನತವಾದ ಸ್ಥಾನ ಎತ್ತರದ ಮಟ್ಟದಲ್ಲಿರುವವರು ವಿವೇಕ ಮರೆಯಬಾರದು, ಅಚಾತುರ್ಯ‌ ನಡೆಯುತ್ತವೆ, ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು, ಮಾಧ್ಯಮ ತಿದ್ದಿಬುದ್ದಿ ಹೇಳಿದಂತೆ ಅನುಸರಿಸಿಕೊಂಡು ಸಾಗಬೇಕಿದೆ.

ದರ್ಶನ್​ ಭೇಟಿ ರೇಣುಕಸ್ವಾಮಿ ಕುರಿತು ಮಾತನಾಡಲಾಯಿತ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿನೋದ್​ ರಾಜ್, ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿಯಾದಾಗ ಅವರು ರೇಣುಕಾ ಸ್ವಾಮಿ ಕುಟುಂಬದ ಬಗ್ಗೆ ಮಾತನಾಡಲಿಲ್ಲ. ಸಿಕ್ಕ ಸಮಯಾವಕಾಶದಲ್ಲಿ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ. ದರ್ಶನ್​ ನನ್ನನ್ನು ನೋಡಿದಾಕ್ಷಣ ಭಾವುಕರಾಗಿ ತಬ್ಬಿಕೊಂಡರು. ಇಂತಹ ಘಟನೆ ನಡೆಯಬಾರದಿತ್ತು, ಮನುಷ್ಯ, ಕ್ರೋಧ, ದ್ವೇಷ, ಅಸೂಯೆ ಎಲ್ಲ ಬಿಡಬೇಕು, ಎಲ್ಲದಕ್ಕೂ ಕಡಿವಾಣ ಹಾಕಬೇಕಿದೆ. ನಮ್ಮ ತಾಯಿಯವರ ಸಿನೆಮಾ ನೋಡಿದ್ದೇವೆ ಎಂದು ರೇಣುಕಾಸ್ವಾಮಿ ತಂದೆ ಹೇಳಿದರು. ಅದನ್ನು ಕೇಳಿ ಇನ್ನಷ್ಟು ಬೇಸರವಾಯ್ತು ಎಂದು ಹಿರಿಯ ನಟ ವಿನೋದ್​ ರಾಜ್​ ಅವರು ರೇಣುಕಸ್ವಾಮಿ ಕುಟುಂಬದವರನ್ನು ಭೇಟಿ ಬಳಿಕ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net