ಮಂಗಳೂರು: ಸ್ಯಾಂಡಲ್ವುಡ್ ನಟ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತಾದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ.
Yash Boss in Mangalore Airport🔥
On the way to Dharmasthala🙏🏻#YashBoss #TOXIC #TOXICTheMovie @TheNameIsYash #Yash #DavangereYashFC pic.twitter.com/G2lcDxyXht— Davangere Yash FC (@DavangereYashFC) August 6, 2024
ಧರ್ಮಸ್ಥಳದಲ್ಲಿ ಯಶ್ ಅವರು ಮೊದಲು ದೇವರ ದರ್ಶನ ಪಡೆದಿದ್ದಾರೆ. ಆ ಬಳಿಕ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಆ ಬಳಿಕ ಇಬ್ಬರೂ ಕುಳಿತು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ.
ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಮ್ಮ ಹರಕೆ ತೀರಿಸಲು ದಂಪತಿ ಬಂದಿದ್ದರು ಎನ್ನಲಾಗಿದೆ.
ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಇದರ ಶೂಟಿಂಗ್ ಆರಂಭ ಆಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ಬಂದು ಮಂಜುನಾಥನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.