17 C
Bangalore
Monday, December 9, 2019

ನನ್ನನ್ನು ಎಷ್ಟು ಹೀಯಾಳಿಸುತ್ತಾರೊ ನಾನು ಅಷ್ಟೇ ಮೆರಿತೀನಿ ಎಂದು ವಿರೋಧಿಗಳಿಗೆ ಟಾಂಗ್​ ನೀಡಿದ ನಟ ಯಶ್​

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಮಂಡ್ಯ: ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅಂಬರೀಷ್​ ಪರ ಚುನಾವಣಾ ಪ್ರಚಾರಕ್ಕೆ ಧುಮುಕಿ ಹಲವರ ಕೆಂಗಣ್ಣಿಗೆ ಗುರಿಯಾಗಿರುವ ನಟ ಯಶ್​ ಅವರು ತಮ್ಮ ವಿರುದ್ಧ ಮಾತನಾಡುವವರಿಗೆ ಖಡಕ್​ ಎಚ್ಚರಿಕೆ ಸಂದೇಶವೊಂದನ್ನು ರವಾನಿಸಿದ್ದಾರೆ.

ಮಳವಳ್ಳಿ ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಬಿರುಸಿನ ಪ್ರಚಾರದ ನಡುವೆ ಮಾತನಾಡಿದ ಯಶ್​, ನಾವು ಚುನಾವಣಾ ಪ್ರಚಾರಕ್ಕೆ ಯಾಕೆ ಬಂದಿದ್ದೀವಿ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಚುನಾವಣೆಗೆ ಬಂದಿರುವುದಕ್ಕೆ ನಾವು ಕೆಟ್ಟವರಾಗಿದ್ದೀವಿ. ಆದರೆ, ಮನುಷ್ಯನಿಗೆ ನಿಯತ್ತು ಬಹಳ ಮುಖ್ಯ. ನಾನು ಬೆಳೆಯುವ ಸಂದರ್ಭದಲ್ಲಿ ಅಂಬರೀಷ್ ಅವರು ಬೆನ್ನಿಗೆ ನಿಂತು ಆಶೀರ್ವಾದ ಮಾಡಿದ್ದರು. ಅವರ ಕುಟುಂಬಕ್ಕೆ ನಾವು ಮಕ್ಕಳ್ಳೇ, ಅದನ್ನು ಯಾರಾದರೂ ಟೀಕೆ ಮಾಡಿದರೆ, ಯಾವನಾದರೂ ಪ್ರಶ್ನೆ ಮಾಡಿದರೆ ಅದು ಸರಿಯಲ್ಲ ಎಂದು ನಿಖಿಲ್​ಗೆ ಟಾಂಗ್​ ನೀಡಿದರು.

ಈ ಚುನಾವಣೆ ಮಂಡ್ಯದ ಸ್ವಾಭಿಮಾನದ ಪ್ರಶ್ನೆಯಾಗಿದೆ. ಅಂಬರೀಷ್ ಅಣ್ಣನ ಹೆಂಡತಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡಿದ ತಕ್ಷಣವೇ ಕೆಟ್ಟವರಾಗೋದ್ರಾ? ನೀವು ಕೆಲಸ ಮಾಡಿದ್ದರೆ ಜನರು ಆಶೀರ್ವಾದ ಮಾಡುತ್ತಾರೆ. ಅದನ್ನು ಬಿಟ್ಟು ಗಂಡ ಸತ್ತವರು ಮನೆ ಸೇರಿಕೊಳ್ಳಬೇಕು. ಮನೆಯಿಂದ ಆಚೆ ಬರಬಾರದು. ಯಾವುದೋ ಊರಿಗೆ ಸೇರಿದವರು. ಜಾತಿಗೆ ಸಂಬಂಧ ಪಟ್ಪವರಲ್ಲ ಎನ್ನುವುದು ಯಾವ ನ್ಯಾಯ ಸ್ವಾಮಿ, ಸುಮಲತಾ ಅವರಿಗೆ ಸಹಾಯ ಮಾಡುವುದಕ್ಕೆ ಬರುತ್ತೇವೆ ಅಂದರೆ ನಾವು ಕಳ್ಳೆತ್ತು ಆಗಿಬಿಡ್ತೀವಾ? ಎಂದು ಟೀಕಾ ಪ್ರಹಾರ ನಡೆಸಿದರು.

ರೈತರ ಬಗ್ಗೆ ಅಭಿಮಾನ ನಮಗೂ ಇದೆ. ನನ್ನನ್ನು ಎಷ್ಟು ಹೀಯಾಳಿಸುತ್ತಾರೊ ನಾನು ಅಷ್ಟೇ ಮೆರಿತೀನಿ ಎಂದು ಜೆಡಿಎಸ್ ನಾಯಕರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ ಯಶ್​, ಒಳ್ಳೆಯ ಸುವರ್ಣವಕಾಶ ಸಿಕ್ಕಿದೆ. ಸುಮಲತಾ ಅಕ್ಕ ಅವರು ಕೆಲಸ ಮಾಡುತ್ತಾರೆ. ಅವರ ಜತೆ ನಾವು ಇರುತ್ತೇವೆ. ಒಂದೇ ಒಂದು ಅವಕಾಶ ಮಾಡಿಕೊಡಿ ಎಂದು ಯಶ್​ ಕೈಮುಗಿದು ಮನವಿ ಮಾಡಿದರು. (ದಿಗ್ವಿಜಯ ನ್ಯೂಸ್​)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...