ಮನೆ ಬಾಡಿಗೆ ಕೊಡದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡ್ತಾರೆ ಎಂದಿದ್ದ ನಿಖಿಲ್‌ಗೆ ಯಶ್‌ ಕೊಟ್ಟ ಖಡಕ್‌ ಉತ್ತರ ಹೀಗಿದೆ

Latest News

ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೊಡಿಸಿ

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಜಿಲ್ಲೆಯ ಕೆಎಎಸ್ ಮತ್ತು ಐಎಎಸ್ ಅಧಿಕಾರಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ...

ಕಟೀಲು ಮೇಳಗಳ ತಿರುಗಾಟಕ್ಕೆ ಚಾಲನೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ 2019-20ನೇ ಸಾಲಿನ ತಿರುಗಾಟಕ್ಕೆ ದೇವಳದ ಗರ್ಭಗುಡಿ ಮುಂದೆ ಕಲಾವಿದರಿಗೆ ಅರ್ಚಕ...

ಕಲ್ಕಾರಿನಲ್ಲಿ ಕುಸಿದ ಮೋರಿ

ಹರಿಪ್ರಸಾದ್ ನಂದಳಿಕೆ, ಬೆಳ್ಮಣ್.ಕಾರ್ಕಳ ಪಳ್ಳಿ ರಾಜ್ಯ ಹೆದ್ದಾರಿಯಲ್ಲಿ ಪಳ್ಳಿ ಗ್ರಾಪಂ ವ್ಯಾಪ್ತಿಯ ಕಲ್ಕಾರ್ ಸೇತುವೆ ಸಮೀಪ ಮೋರಿ ಕುಸಿದು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು...

ಪೊಲೀಸ್ ತರಬೇತಿ ಕೇಂದ್ರ ನನೆಗುದಿಗೆ?

ಅವಿನ್ ಶೆಟ್ಟಿ ಉಡುಪಿ ಕರಾವಳಿ-ಮಲೆನಾಡು ಕರ್ನಾಟಕವನ್ನು ಕೇಂದ್ರಿಕರಿಸಿ ಉಡುಪಿ ಜಿಲ್ಲೆಯ ಉಪ್ಪೂರಿನಲ್ಲಿ ಸ್ಥಾಪನೆಯಾಗಬೇಕಿದ್ದ ಪೊಲೀಸ್ ತರಬೇತಿ ಕೇಂದ್ರ ನನೆಗುದಿಗೆ ಬಿದ್ದಂತಿದೆ. 2015ರಲ್ಲಿ ಜಿಲ್ಲಾಡಳಿತ...

ಕಲೋತ್ಸವದಲ್ಲಿ ಜನಮನ ಸೂರೆಗೊಳ್ಳಲಿದೆ ಪೂರಕ್ಕಳಿ

ಕಾಸರಗೋಡು: ಜಿಲ್ಲೆಯಲ್ಲಿ ದೀರ್ಘಕಾಲದ ನಂತರ ನಡೆಯಲಿರುವ ರಾಜ್ಯಮಟ್ಟದ ಶಾಲಾ ಕಲೋತ್ಸವದಲ್ಲಿ ಯಕ್ಷಗಾನದಂತೆಯೇ, ಜಿಲ್ಲೆಯ ಸ್ವಂತ ಕಲೆಯಾಗಿರುವ ಪೂರಕ್ಕಳಿಯೂ ತಮ್ಮದೇ ಅಸ್ತಿತ್ವ ತೋರಿಸಿಕೊಡಲಿದೆ. ಚಂದ್ರಗಿರಿ...

ಮಂಡ್ಯ: ಬಾಡಿಗೆಯನ್ನು ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದಿದ್ದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ನಟ ಯಶ್ ತಿರುಗೇಟು ನೀಡಿದ್ದಾರೆ.

ಇಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಪರ ಪ್ರಚಾರ ಕಾರ್ಯಕೈಗೊಂಡಿರುವ ಯಶ್‌, ಹೌದಪ್ಪ ನನಗೆ ಬಾಡಿಗೆ ಕಟ್ಟುವುದಕ್ಕೆ ಯೋಗ್ಯತೆ ಇಲ್ಲ ಅಂದುಕೊಳ್ಳಿ. ಆದರೆ, ರಾಜ್ಯದಲ್ಲಿ ಸಾಕಷ್ಟು ರೈತರಿದ್ದಾರೆ. ಇಲ್ಲಿ ಮಾತ್ರ ಅಲ್ಲ. ಉತ್ತರ ಕರ್ನಾಟಕದಲ್ಲೂ ಸಾಕಷ್ಟು ರೈತರು ಇದ್ದಾರೆ. ನಾನೇನ್ ಮಾಡಿದ್ದೇನೆ ಎನ್ನುವುದನ್ನು ಕೊಪ್ಪಳ ಅಂತಾ ಊರು ಇದೆಯಲ್ಲ ಅಲ್ಲಿ ಹೋಗಿ ಕೇಳಲಿ ಎಂದು ನಿಖಿಲ್‌ಗೆ ತಿರುಗೇಟು ನೀಡಿದ್ದಾರೆ.

ಬಾಡಿಗೆ ಮನೆ ಕುರಿತು ನಿಖಿಲ್‌ ನೀಡಿದ್ದ ಹೇಳಿಕೆಗೆ ಟಾಂಗ್‌ ಕೊಡಿ ಎಂದು ಉಮ್ಮಡಹಳ್ಳಿ ಜನರು ಯಶ್‌ಗೆ ಒತ್ತಾಯಿಸಿದ ವೇಳೆ ಆರಂಭದಲ್ಲಿ ಟಾಂಗ್ ಬೇಡ ಎಂದ ರಾಕಿಂಗ್ ಸ್ಟಾರ್ ಯಶ್, ಕಡೆಗೆ ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ನಿಖಿಲ್ ಪ್ರಶ್ನೆಗೆ ಉತ್ತರಿಸಿದ್ದಾರೆ.

ಮಂಡ್ಯದಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡುವೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್, ಪಕ್ಷೇತರ ಅಭ್ಯರ್ಥಿಯ ಹಿರಿ ಮಗನೋ ಅಥವಾ ಕಿರಿ ಮಗನೋ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಬೇಕಾಗುತ್ತದೆ. ನನ್ನ ಯೋಗ್ಯತೆ ಬಗ್ಗೆ ಅವರು ಪ್ರಶ್ನೆ ಮಾಡುತ್ತಾರೆ. ನಮ್ಮ ತಾತ ದೇವೇಗೌಡರು ಪ್ರಧಾನಿಯಾದಾಗ ನಾವು ಕತ್ರಿಗುಪ್ಪೆಯಲ್ಲಿ ಬಾಡಿಗೆ ಮನೆಯಲ್ಲಿದ್ದೆವು. ಆದರೆ, ಇವತ್ತು ಬಾಡಿಗೆ ಕೊಡದಿದ್ದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,675FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...