ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್​ಕ್ಯಾಂಡಿ ಕೊಡಿಸಿದ ಯಶ್!

Yash Radhika
Published on

ಬೆಂಗಳೂರು: ನಟ ರಾಕಿಂಗ್​ ಸ್ಟಾರ್​ ಯಶ್​ ಪ್ಯಾನ್​ ಇಂಡಿಯಾ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ವಿಶ್ವದಾದ್ಯಂತ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ನಟ ಯಶ್​ ಎಷ್ಟೇ ಬ್ಯುಸಿ ಇದ್ದರೂ ತಮ್ಮ ಕುಟುಂಬದವರಿಗೆ ಸಮಯವನ್ನು ಮೀಸಲಿಡುತ್ತಾರೆ. ಅದಕ್ಕೆ ಪೂರಕವೆಂಬಂತೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿವೆ.

ಇದೀಗ ನಟ ಯಶ್​ ಹಾಗೂ ಪತ್ನಿ ರಾಧಿಕಾ ಪಂಡಿತ್​ ದೇವಾಲಯ ಒಂದಕ್ಕೆ ಭೇಟಿ ನೀಡಿದ ವೇಳೆ ಸಾಮಾನ್ಯರಂತೆ ರಸ್ತೆ ಬದಿ ಇರುವ ಅಂಗಡಿ ಒಂದಕ್ಕೆ ಭೇಟಿ ನೀಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ವೈರಲ್​ ಆಗಿದೆ.

Yash Radhika

ವೈರಲ್​ ಆಗಿರುವ ವಿಡಿಯೋದಲ್ಲಿ ಕುಟುಂಬದವರ ಜೊತೆ ತೆರಳಿರುವ ನಟ ಯಶ್​ ರಸ್ತೆ ಬದಿ ಇರುವ ಪೆಟ್ಟಿಗೆ ಅಂಗಡಿಗೆ ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಅವರಿಗೆ ಐಸ್​ ಕ್ಯಾಂಡಿ ಕೊಡಿಸಿದ್ದಾರೆ. ಬಳಿಕ ಸ್ಥಳೀಯರೊಂದಿಗೆ ಮಾತನಾಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಮಾಲಿವುಡ್​ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನದ ಟಾಕ್ಸಿಕ್​ ಸಿನಿಮಾದ ಚಿತ್ರೀಕರಣದಲ್ಲಿ ನಟ ಯಶ್​ ಬ್ಯುಸಿ ಇದ್ದಾರೆ. ಈಗಾಗಲೇ ಟೈಟಲ್​ ಹಾಗೂ ಫಸ್ಟ್​ ಲುಕ್​ ಟೀಸರ್​ನಿಂದ ಸಾಕಷ್ಟು ಹೈಪ್​ ಕ್ರಿಯೇಟ್​ ಮಾಡಿರುವ ಚಿತ್ರದ ಬಗೆಗಿನ ಅಪ್ಡೇಟ್​ಗಾಗಿ ಸಿನಿರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net