More

    ಮಹಿಳಾ ಮೀಸಲಾತಿ ಮಸೂದೆ ಬಿಜೆಪಿಯ ಚುನಾವಣೆ ಗಿಮಿಕ್: ಮಲ್ಲಿಕಾರ್ಜುನ ಖರ್ಗೆ

    ಜೈಪುರ: ನೂತನ ಸಂಸತ್​ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬದಲು ಕೇಂದ್ರ ಸರ್ಕಾರ ಸಿನಿಮಾ ನಟ-ನಟಿಯರನ್ನು ಆಹ್ವಾನಿಸುವ ಮೂಲಕ ರಾಷ್ಟ್ರಪತಿಗೆ ಅವಮಾನ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

    ವರ್ಷಾಂತ್ಯದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ ಕಾಂಗ್ರೆಸ್​ನಲ್ಲಿ ಎಲ್ಲಾ ಸಮುದಾಯದ ನಾಯಕರಿದ್ದಾರೆ. ಆದರೆ, ಬಿಜೆಪಿಯಲ್ಲಿ ಆ ರೀತಿ ಇಲ್ಲ ಎಂದಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನತ್ತ ಸ್ಥಾನವನ್ನು ಹೊಂದಿದ್ದು, ಬಿಜೆಪಿಯವರು ಅವರನ್ನು ನೂತನ ಸಂಸತ್​ ಭವನಕ್ಕೆ ಆಹ್ವಾನಿಸದೆ ಅವಮಾನ ಮಾಡಿದ್ದಾರೆ. ನೂತನ ಸಂಸತ್​ ಭವನದ ಶಂಕುಸ್ಥಾಪನೆ ಸಮಯದಲ್ಲಿ ರಾಷ್ಟ್ರಪತಿಗಳಾಗಿದ್ದ ರಾಮ್​ನಾಥ್​ ಕೋವಿಂದ್​ ಅವರನ್ನು ಅಸ್ಪೃಶ್ಯರು ಎಂಬ ಕಾರಣಕ್ಕೆ ಬಿಜೆಪಿಯವರು ಆಹ್ವಾನಿಸಿರಲಿಲ್ಲ.

    RPCC

    ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣ; ಪ್ರಕರಣ ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಚಂದ್ರಬಾಬು ನಾಯ್ಡು

    ಒಂದು ವೇಳೆ ಅಸ್ಪೃಶ್ಯರೊಬ್ಬರು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೆ ಆ ಸ್ಥಳವನ್ನು ಗಂಗಾಜಲ ಹಾಕಿ ತೊಳೆಯುತ್ತಿದ್ದರು. ಇದು ಸಮಾಜದಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

    ಮಹಿಳೆಯರಿಗೆ ಮೀಸಲಾತಿ ನೀಡಲು ಬಯಸದ ಬಿಜೆಪಿ ಮಸೂದೆಯನ್ನು ಹೇಗೆ ಜಾರಿ ಮಾಡಿತ್ತು ಎಂಬುದು ನಮಗೆ ಅರ್ಥವಾಗುತ್ತಿಲ್ಲ. ವಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರಿಕೂಟವನ್ನು ನೋಡಿ ಹೆದರಿರುವ ಬಿಜೆಪಿ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿದೆ. ಇದು ಚುನಾವಣಾ ಗಿಮಿಕ್​ ಅಲ್ಲದೇ ಬೇರೇನೂ ಅಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts